Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಬ್ಯಾಂಕ್ ಕಾಲೋನಿಯಲ್ಲಿ ಹಾಡು ಹಗಲೇ ದರೋಡೆ : ಮನೆಗೆ ನುಗ್ಗಿ ಒಡವೆ ಕದ್ದು, 50 ಲಕ್ಷ ಸುಲಿಗೆ…!

---Advertisement---

 

ಸುದ್ದಿಒನ್, ಚಿತ್ರದುರ್ಗ, (ಜು.10): ಮೂವರು ದುಷ್ಕರ್ಮಿಗಳು ಮನೆಗೆ ನುಗ್ಗಿ, 50 ಲಕ್ಷ ನಗದು ಮತ್ತು ರೂ. 4.2 ಲಕ್ಷ ಬೆಲೆಬಾಳುವ ಆಭರಣಗಳನ್ನು ದೋಚಿ ಪರಾರಿಯಾಗಿದ ಘಟನೆ ನಗರದ ಬ್ಯಾಂಕ್ ಕಾಲೋನಿಯಲ್ಲಿ ಶನಿವಾರ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಜೀರ್ ಸಾಬ್ ಎನ್ನುವವರು ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶನಿವಾರ ಬೆಳಿಗ್ಗೆ ನಜೀರ್ ಸಾಬ್ ಅವರು ತಮ್ಮ ಪತ್ನಿ, ಮಗ ಮತ್ತು ಸೊಸೆ ಎಲ್ಲರೂ ಮನೆಯಲ್ಲಿರುವಾಗ ಬೆಳಗ್ಗೆ ಸುಮಾರು
09 : 20 ರ ಸಮಯದಲ್ಲಿ ಯಾರೋ ಮೂವರು ಏಕಾಏಕಿ ಕೈಯಲ್ಲಿ ಪಿಸ್ತೂಲ್, ಮಚ್ಚು ಮತ್ತು ಚಾಕುವಿನೊಂದಿಗೆ
ಮನೆಯೊಳಗೆ ನುಗ್ಗಿದ್ದಾರೆ.

ಅವರನ್ನು ಹೆದರಿಸಿ, ಹಲ್ಲೆ ಮಾಡಿ, ರೂಮಿನಲ್ಲಿ ಕೂಡಿಹಾಕಿದರು. ಅಷ್ಟರಲ್ಲೇ ಅವರ ಮಗಳು ಮತ್ತು ಅಳಿಯ ಕೂಡಾ ಮನೆಗೆ ಬಂದಿದ್ದಾರೆ ಅವರನ್ನೂ ಕೂಡಿ ಹಾಕಿ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇಲ್ಲವಾದರೆ ಪ್ರಾಣ ತೆಗೆಯುವುದಾಗಿ ಹೆದರಿಸಿದ್ದಾರೆ.

ಮನೆಯಲ್ಲಿದ್ದ 12 ತೊಲ ಬಂಗಾರದ ಆಭರಣಗಳನ್ನು ದೋಚಿ, ಮಗ ಮತ್ತು ಅಳಿಯನನ್ನು ಅಪಹರಿಸಿ ಒತ್ತೆಯಾಳಾಗಿಟ್ಟುಕೊಂಡು ಒಟ್ಟು 50 ಲಕ್ಷ ಹಣವನ್ನು ಸುಲಿಗೆ ಮಾಡಿರುತ್ತಾರೆ ಎಂದು ನಜೀರ್ ಸಾಬ್ ಶನಿವಾರ ರಾತ್ರಿಯೇ  ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಐಜಿಪಿ ತ್ಯಾಗರಾಜನ್, ಎಸ್ ಪಿ ಪರುಶುರಾಮ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ಈಗಾಗಲೇ ತನಿಖೆ ಕೈಗೊಂಡು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment