Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸವಿತಾ ಸಮಾಜದಿಂದ ಕಾರ್ಮಿಕ ಕಾರ್ಡ್ ವಿತರಣೆ, ಮಳೆಗಾಗಿ ವಿಶೇಷ ಪೂಜೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,ಜು. 25 : ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಸವಿತಾ ಸಮಾಜದ ಜಂಟಿ ಆಶ್ರಯದಲ್ಲಿ ನಗರದ ಶ್ರೀ ಬರಗೆರಮ್ಮ ದೇವಿಗೆ ಶನಿವಾರ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ, ಸಮಾಜದ ಶ್ರಮಿಕ ಬಂಧುಗಳಿಗೆ ಕಾರ್ಮಿಕ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕಾರ್ಮಿಕ ಕಾರ್ಡ್‍ಗಳನ್ನು ವಿತರಿಸಿ ಮಾತನಾಡಿದ ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಎನ್.ಡಿ. ಕುಮಾರ್  ಕಾರ್ಮಿಕ ಕಾರ್ಡ್‍ನ ಮಹತ್ವ ಹಾಗೂ ಅದರಿಂದ ಲಭ್ಯವಾಗುವ ಸೌಲಭ್ಯಗಳ ಬಗ್ಗೆ  ಮಾಹಿತಿ ಅಪಘಾತದಿಂದ ಅಂಗವಿಕಲತೆ: ಕೆಲಸದ ವೇಳೆಯಲ್ಲಿ ಅಥವಾ ಅಪಘಾತದಿಂದ ಶಾಶ್ವತ ಅಥವಾ ಭಾಗಶಃ ಅಂಗವಿಕಲತೆಯಾದರೆ ಆರ್ಥಿಕ ಸಹಾಯಧನ.ಅಸಹಜ/ಅಪಘಾತ ಮರಣ: ನೋಂದಾಯಿತ ಕಾರ್ಮಿಕರು ಅಪಘಾತದಲ್ಲಿ ಅಥವಾ ಅಸಹಜವಾಗಿ ಮರಣ ಹೊಂದಿದರೆ ಅವರ ವಾರಸುದಾರರಿಗೆ/ಕುಟುಂಬಕ್ಕೆ ಪರಿಹಾರ ಧನ ಮತ್ತು ಅಂತಿಮ ಸಂಸ್ಕಾರಕ್ಕಾಗಿ ಧನಸಹಾಯ ದೂರೆಯುತ್ತದೆ ಎಂದು ತಿಳಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷರಾದ ಪಲ್ಲವಿ ಪ್ರಸನ್ನ  “ನಮ್ಮ ಸವಿತಾ ಸಮಾಜವು ಸಂಘಟಿತವಾಗಿ ಬೆಳೆಯಬೇಕಾದರೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಮಾಜದ ಪ್ರತಿಯೊಬ್ಬ ಬಂಧುವಿನ ಸುಖ-ದುಃಖಗಳಲ್ಲಿ ಭಾಗಿಯಾಗುವುದು ಮತ್ತು ಅವರ ಹಕ್ಕುಗಳನ್ನು ತಲುಪಿಸುವುದು ನಮ್ಮ ಒಕ್ಕೂಟದ ಮುಖ್ಯ ಉದ್ದೇಶ. ಸಮಾಜದ ಒಗ್ಗಟ್ಟು ಮತ್ತು ಕಲ್ಯಾಣಕ್ಕಾಗಿ ನಮ್ಮ ಸಂಘಟನೆ ಸದಾ ಶ್ರಮಿಸಲಿದೆ,” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಾಡಿನಲ್ಲಿ ಸಮೃದ್ಧವಾಗಿ ಮಳೆ-ಬೆಳೆಯಾಗಿ ಸುಭಿಕ್ಷೆ ನೆಲೆಸಲಿ ಎಂದು ಪ್ರಾರ್ಥಿಸಿ ಶ್ರೀ ಬರಗೆರಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಸವಿತಾ ಸಮಾಜದ ಜಿಲ್ಲಾ ಉಪಾಧ್ಯಕ್ಷ ಆರ್ ಶ್ರೀನಿವಾಸ್, ಜಿಲ್ಲಾ ಕಾರ್ಯದರ್ಶಿ ಆರ್ ನಾಗರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಶಾಮಣ್ಣ ಜಿ ಎನ್ ಸಂತೋಷ್, ತಾಲೂಕು ಕಾರ್ಯಾಧ್ಯಕ್ಷ ರಂಜಿತ್, ತಾಲೂಕು ಪ್ರತಿನಿಧಿ ü ಅರುಣ್ ರಾಜು ತಾಲೂಕು ಸಂಘಟನಾ ಕಾರ್ಯದರ್ಶಿ ಕುಮಾರ್ ತಾಲೂಕು ಕಾರ್ಯದರ್ಶಿ ಅನಿಲ್ ಜಿಲ್ಲಾ ಮತ್ತು ತಾಲ್ಲೂಕು ಸವಿತಾ ಸಮಾಜದ ಆಡಳಿತ ಮಂಡಳಿಯ ಸದಸ್ಯರು, ಮುಖಂಡರು ಹಾಗೂ ಸಮಾಜದ ಬಂಧುಗಳು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now