Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬೈಕ್, ಕಾರು & ಲಾರಿ ನಡುವೆ ಸರಣಿ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ.24 : ತಾಲ್ಲೂಕಿನ ತಮಟಕಲ್ಲು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶನಿವಾರ ರಾತ್ರಿ ಲಾರಿ, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಲಘಟ್ಟ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ (45) ಮತ್ತು ಬಸವರಾಜಪ್ಪ (50) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಮತ್ತು ಲಾರಿ ನಿಯಂತ್ರಣ ತಪ್ಪಿ ಒಂದಕ್ಕೊಂದು ಬಲವಾಗಿ ಡಿಕ್ಕಿ ಹೊಡೆದಿವೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು, ಪಕ್ಕದಲ್ಲೇ ಚಲಿಸುತ್ತಿದ್ದ ಬೈಕ್ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ಸವಾರರಿಬ್ಬರು ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು, ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ತದನಂತರ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now