Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ : ನಗರಸಭೆ ಉಪಾಧ್ಯಕ್ಷೆ ಸ್ಥಾನಕ್ಕೆ ಶಕೀಲಾಬಾನು ಆಯ್ಕೆ

---Advertisement---

ಚಿತ್ರದುರ್ಗ. ಜುಲೈ28: ಚಿತ್ರದುರ್ಗ ನಗರಸಭೆಯ ಉಪಾಧ್ಯಕ್ಷೆಯಾಗಿ 12ನೇ ವಾರ್ಡ್ ಸದಸ್ಯೆ ಶಕೀಲಾಬಾನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶ್ರೀದೇವಿ ಜಿ.ಎಸ್ ಅವರ ರಾಜೀನಾಮೆಯಿಂದ ತೆರವಾದ ನಗರಸಭೆ ಉಪಾಧ್ಯಕ್ಷೆ ಸ್ಥಾನದ ಆಯ್ಕೆಗೆ ಸೋಮವಾರ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣೆ ನಡೆಯಿತು.

ಶಕೀಲಾ ಬಾನು ಅವರು ನಗರಸಭೆ ಅಧ್ಯಕ್ಷೆ ಸಮಿತಾ ಬಿ.ಎನ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸುರುಲ್ಲಾ ಸೇರಿದಂತೆ ಇತರೆ ಸದಸ್ಯರೊಂದಿಗೆ ಆಗಮಿಸಿ ಉಪಾಧ್ಯಕ್ಷೆ ಸ್ಥಾನದ ಆಯ್ಕೆಗೆ ನಾಮಪತ್ರ ಸಲ್ಲಿಸಿದರು. ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ನಾಮಪತ್ರ ಸ್ವೀಕರಿಸಿ, ನಾಮಪತ್ರದ ಪರಿಶೀಲನೆ ಕಾರ್ಯ ನಡೆಸಿದರು.

ನಿಗಧಿಪಡಿಸಿದ ಅವಧಿಯೊಳಗೆ ಬೇರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಶಕೀಲಾ ಬಾನು ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ  ಮೆಹಬೂಬ್ ಜಿಲಾನಿ ಖುರೇಷಿ ಘೋಷಿಸಿದರು. ಈ ವೇಳೆ ನಗರ ಸಭೆ ಪೌರಾಯಕ್ತೆ ಎಂ.ರೇಣುಕಾ ಉಪಸ್ಥಿತರಿದ್ದರು.

35 ವಾರ್ಡ್‍ಗಳ ಚುನಾಯಿತ ಸದಸ್ಯರು ಹಾಗೂ ಸ್ಥಳೀಯ ವಿಧಾನಸಭೆ ಶಾಸಕ ಮತ್ತು ಲೋಕಸಭಾ ಸಂಸದರು ಸೇರಿ ಒಟ್ಟು 37 ಸದಸ್ಯರ ಸಂಖ್ಯಾ ಬಲವನ್ನು ಚಿತ್ರದುರ್ಗ ನಗರಸಭೆ ಹೊಂದಿದೆ. ಇದರಲ್ಲಿ ಒಟ್ಟು 9 ಸದಸ್ಯರು ಉಪಾಧ್ಯಕ್ಷರ ಚುನಾವಣೆ ಸಭೆಗೆ ಗೈರು ಹಾಜರಾಗಿದ್ದರು. ನೂತನವಾಗಿ ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾದ ಶಕೀಲಾ ಬಾನು ಅವರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನಗರಸಭೆ ಅಧ್ಯಕ್ಷೆ ಸಮಿತಾ ಬಿ.ಎನ್. ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸುರುಲ್ಲಾ ಸೇರಿದಂತೆ ಸದಸ್ಯರು ಅಭಿನಂದಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...