ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಮೇ. 30 : ವೀರಶೈವ ಸಮಾಜದ ಮಾಜಿ ಅಧ್ಯಕ್ಷರು, ಜಯಪದ್ಮ ಮೋಟಾರ್ ಸರ್ವಿಸ್ ಮಾಲಿಕರಾದ ಶರಣ ಕೆ.ಆರ್. ಶಿವಪ್ರಕಾಶ್‍ರವರು ಮೇ. 7 ರಂದು ನಿಧನರಾಗಿದ್ದು ಇವರ ಸ್ಮರಣೆ ಕಾರ್ಯಕ್ರಮವೂ ಮೇ. 31ರ ಭಾನುವಾರ ನಗರದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಅವರ ಪುತ್ರರಾದ ನವೀನ್ ಕೆ.ಎಸ್. ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕನಕ ಗುರುಪೀಠದ ಕಾಗಿನೆಲೆ ಮಹಾಸಂಸ್ಥಾನ ಶ್ರೀ ನಿರಂಜನಾ ನಂದಪುರಿ ಮಹಾಸ್ವಾಮೀಜಿ, ಹೊಸದುರ್ಗ. ತಾ ಕುಂಚಿಟಿಗ ಸಂಸ್ಥಾನದ ಶ್ರೀ ಡಾ. ಶಾಂತವೀರ ಮಹಾಸ್ವಾಮೀಜೀ, ಭೋವಿಗುರು ಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿ.ಶ್ರೀ ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಮಹಾಸ್ವಾಮೀಜಿ, ಹರಿಹರದ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಡಾ. ಬಸವಕುಮಾರ ಮಹಾಸ್ವಾಮೀಜಿ, ದಾವಣಗೆರೆಯ ವಿರಕ್ತಮಠದ ಶ್ರೀ ಡಾ.ಬಸವಪ್ರಭು ಮಹಾಸ್ವಾಮೀಜಿ. ಶಿವಮೊಗ್ಗದ ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಮಹಾಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮೀಜಿ. ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸರ್ದಾರ್ ಸೇವಾಲಾಲ್ ಮಹಾಸ್ವಾಮೀಜಿ. ಕೇತೇಶ್ವರ ಗುರುಪೀಠದ ಶ್ರೀ ಬಸವ ಇಮ್ಮಡಿ ಕೇತೇಶ್ವರ ಮಹಾಸ್ವಾಮೀಜಿ ವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಮಾಜಿ ಸಚಿವರಾದ ಹೆಚ್. ಏಕಾಂತಯ್ಯ ವಹಿಲಿದ್ದಾರೆ. ಹಿರಿಯ ಪತ್ರಕರ್ತರಾದ ಜಿ.ಎಸ್. ಉಜ್ಜನಪ್ಪ ಸ್ಮರಣಾ ನುಡಿಗಳನ್ನಾಡುವರು, ಮಾಜಿ ಉಪಮುಖ್ಯಮಂತ್ರಿಗಳು. ಲೋಕಸಭಾ ಸದಸ್ಯರಾದ ಗೋವಿಂದ ಎಂ. ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಂ. ಚಂದ್ರಪ್ಪ, ಕೆ.ಸಿ. ವೀರೇಂದ್ರ ಪಪ್ಪಿ, ಶಾಸಕರು ಹಾಗೂ ಅಧ್ಯಕ್ಷರು, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ರಘುಮೂರ್ತಿ ಮಾಜಿ ಶಾಸಕರಾದಜಿ.ಹೆಚ್.ತಿಪ್ಪಾರೆಡ್ಡಿ,ಎಸ್.ಕೆ.ಬಸವರಾಜನ್ ಭಾಗವಹಿಸಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















