ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ಮುರುಘ ರಾಜೇಂದ್ರ ಬೃಹನ್ಮಠ ಹಾಗೂ ಮುರುಘರಾಜೇಂದ್ರ ವಿಶ್ವವಿದ್ಯಾಲಯದಿಂದ ಆಗಸ್ಟ್ 2 ರಂದು ನಗರದ ಹೊರವಲಯದ ಸೀಬಾರದ ಶ್ರೀ ಗುರುಪಾದ ಮುರುಘರಾಜೇಂದ್ರ ಮಹಾಸ್ವಾಮಿಗಳ ವನದಲ್ಲಿ ಶ್ರಮದಾನ, ಶಿವಯೋಗ ಹಾಗೂ ಗಾನ ಸರಸ್ವತಿ ಡಾ.ಎಸ್.ಜಾನಕಿ, ಹಿರಿಯ ಗಾಂಧಿವಾದಿ, ಆದರ್ಶ ರಾಜಕಾರಣಿ ಎಸ್.ನಿಜಲಿಂಗಪ್ಪ ಅವರ ಅನುಯಾಯಿ ದುರ್ಗದ ಮಣ್ಣಿನ ಮಗ ರಾಜ್ಯಸಭಾ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಅವರಿಗೆ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 7 ಗಂಟೆಯಿಂದ 8 ರವರೆಗೆ ಶ್ರಮದಾನ ಬಳಿಕ ಶಿವಯೋಗ, ಸಾಮೂಹಿಕ ಇಷ್ಟಲಿಂಗ ಧ್ಯಾನ ನಡೆಯಲಿದೆ. 9.15 ರಿಂದ ನುಡಿನಮನ ಪ್ರಾರಂಭವಾಗಲಿದ್ದು, ಹಿರಿಯ ವಕೀಲರಾದ ಪಾತ್ಯರಾಜನ್ ಅವರು ಎಚ್.ಹನುಮಂತಪ್ಪ ವ್ಯಕ್ತಿತ್ವ ಕುರಿತು ಮಾತನಾಡಲಿದ್ದಾರೆ. ಎಸ್.ಜಾನಕಿ ಅವರಿಗೆ ಸಂಗೀತ ಕಲಾವಿದರು ಗಾನ ನಮನ ಸಲ್ಲಿಸಲಿದ್ದಾರೆ.
ಇದೇ ವೇಳೆ ಹಿರಿಯ ಪತ್ರಕರ್ತ, ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಕೆ.ಪಿ.ಓಂಕಾರಮೂರ್ತಿ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.
ಎಸ್.ಜೆ.ಎಂ.ವಿದ್ಯಾಪೀಠದ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ್, ಆಡಳಿತ ಮಂಡಳಿ ಸದಸ್ಯರಾದ ಬಸವಕುಮಾರ ಸ್ವಾಮೀಜಿ, ಡಾ.ಪಿ.ಎಸ್.ಶಂಕರ್, ಎಸ್.ಎನ್.ಚಂದ್ರಶೇಖರ್, ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಉಪಸ್ಥಿತಿವಹಿಸಲಿದ್ದಾರೆ. ಜಮುರಾ ಕಲಾಲೋಕ ವಚನ ಸಂಗೀತ ಪ್ರಸ್ತುತ ಪಡಿಸಲಿದೆ ಎಂದು ಶ್ರೀಮಠ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











