ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 11 : ತಾಲ್ಲೂಕಿನ ಭೀಮಸಮುದ್ರ ರಸ್ತೆಯ ಸಿದ್ದಾಪುರ ಗ್ರಾಮದ ವಾಸಿ ಷಣ್ಮುಖ (48 ವರ್ಷ) ಅವರು ನಿನ್ನೆ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು 3 : 30 ರ ನಂತರ ಸಿದ್ದಾಪುರ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಘಟನೆ ಹಿನ್ನೆಲೆ : ಷಣ್ಮುಖ ಅವರು ನಿನ್ನೆ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿದ್ದರು. ವಾಪಸು ಬೊಲೇರೋ ಕಾರಿನಲ್ಲಿ ಬರುವಾಗ ತುಮಕೂರಿನ ಕೋರಾ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.










