Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೂಲಭೂತ ಸೌಲಭ್ಯಗಳಿಗಾಗಿ ಕೊಳಗೇರಿ ನಿವಾಸಿಗಳಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಹಿಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ವಿಜಯನಗರ ಬಡಾವಣೆ, ಹಳ್ಳದೇರಿಯಾ, ಬುದ್ದನಗರ, ಕುಂಬಾರಪೇಟೆ ಹಾಗೂ ವಿವಿಧ ಕೊಳಚೆಪ್ರದೇಶಗಳ ನಿವಾಸಿಗಳು ಹಕ್ಕುಪತ್ರ, ಮೂಲಭೂತ ಸೌಕರ್ಯಗಳಾದ ರಸ್ತೆ, ಬೀದಿದೀಪ, ಕುಡಿಯುವ ನೀರು, ಚರಂಡಿ, ಶೌಚಾಲಯ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಕೆ.ಕೆ.ಎನ್.ಎಸ್.ಎಸ್. ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ಎನ್.ರಂಗಸ್ವಾಮಿ, ಇಮಾಂಸಾಬ್, ಮೈಲಾರಪ್ಪ, ಸಹೀನಾಭಾನು, ಲೀಲಾವತಿ, ಭಾರತಿ, ಮೇರಿಯಮ್ಮ
ರಾಧಮ್ಮ, ಮಂಜಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...