Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಆರಂಭ : ಸಚಿವ ಡಿ.ಸುಧಾಕರ್ ಅವರಿಂದ ಚಾಲನೆ

---Advertisement---

 

ಚಿತ್ರದುರ್ಗ. ಸೆ.22: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಜಿಲ್ಲೆಯಾದ್ಯಂತ ಸೋಮವಾರ ಆರಂಭವಾಯಿತು.

ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಬುದ್ಧನಗರದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಅಧಿಕಾರಿಗಳು ಹಾಗೂ ಗಣತಿದಾರರೊಂದಿಗೆ ಮನೆ ಭೇಟಿ ನೀಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರವು ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ, ರಾಜ್ಯಾದ್ಯಂತ ಸಮೀಕ್ಷಾ ಕಾರ್ಯ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಜಾತಿ ಗಣತಿ ಮಾಡುತ್ತಿಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಅಂಕಿ-ಅಂಶಗಳ ಮೂಲಕ ಸಂಗ್ರಹಿಸುವುದು, ಆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದೇ ಸಮೀಕ್ಷೆಯ ಉದ್ದೇಶವಾಗಿದೆ ಎಂದು ಹೇಳಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 4,62,280 ಮನೆಗಳನ್ನು ಗುರುತಿಸಲಾಗಿದ್ದು, ಒಟ್ಟು 3768 ಗಣತಿದಾರರು, 376 ಮೇಲ್ವಿಚಾರಕರು, 92 ಮಾಸ್ಟರ್ ಟ್ರೈನರ್ಸ್‍ಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಸಮೀಕ್ಷೆಯಲ್ಲಿ ಒಟ್ಟು 60 ಪ್ರಶ್ನಾವಳಿಗಳು ಕೇಳಿದ್ದು, ಮುಖ್ಯವಾಗಿ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಆಧಾರದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸಮೀಕ್ಷೆಯ ಬಗ್ಗೆ ಅರಿವು ಮೂಡಿಸಲು ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಎನ್‍ಆರ್‍ಎಲ್‍ಎಂ ಮೂಲಕ ಮನೆಗಳಿಗೆ ಭೇಟಿ ನೀಡಿ ಕುಟುಂಬ ಅನುಸೂಚಿ ನಮೂನೆಗಳನ್ನು ನೀಡಿ ಜಾಗೃತಿ ಮೂಡಿಸಲಾಗಿದೆ. ಒಟ್ಟು 4,31,000 ಕುಟುಂಬ ಅನುಸೂಚಿಗಳನ್ನು ಚಿತ್ರದುರ್ಗ ಜಿಲ್ಲೆಗೆ ನೀಡಲಾಗಿದ್ದು, ಮನೆಗಳಿಗೆ ನಮೂನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದರು.

 

ಗಣತಿದಾರರಿಗೆ ಒಟ್ಟು 3491 ಕೈಪಿಡಿಗಳನ್ನು ವಿತರಣೆ ಮಾಡಲಾಗಿರುತ್ತದೆ. ಗಣತಿದಾರರಿಗೆ ಅವಶ್ಯವಾಗಿ ಬೇಕಾಗಿರುವ ಗುರುತಿನ ಚೀಟಿಗಳನ್ನು ಮತ್ತು ಟೋಪಿಗಳನ್ನು ವಿತರಣೆ ಮಾಡಲಾಗಿರುತ್ತದೆ. ಕುಟುಂಬದ ಸದಸ್ಯರು, ಮುಖ್ಯಸ್ಥರಿಂದ ಸಮೀಕ್ಷೆಗೆ ಮಾಹಿತಿ ಪಡೆದ ನಂತರ ಪಡೆಯಬೇಕಾದ ಸ್ವಯಂ ದೃಢೀಕರಣ ಪತ್ರಗಳನ್ನು ಗಣತಿದಾರರಿಗೆ ಜಿಲ್ಲಾಡಳಿತದಿಂದ ವಿತರಣೆ ಮಾಡಲಾಗಿರುತ್ತದೆ. ಸಮೀಕ್ಷಾ ಕಾರ್ಯವು ಸೆ.22 ರಿಂದ ಅ.07 ರವರೆಗೆ ಜಿಲ್ಲಾಧಿಕಾರಿಗಳ ಮುಂದಾಳತ್ವದಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಸಹಾಯವಾಣಿ: ಸಮೀಕ್ಷಾ ಕಾರ್ಯಕ್ಕೆ ಜಿಲ್ಲೆಯ 06 ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು, ಗಣತಿದಾರರು ಯಾವುದೇ ಪ್ರಶ್ನಾವಳಿಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ.

ಚಿತ್ರದುರ್ಗ ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ-08194-235034, ಚಳ್ಳಕೆರೆ-08195-200130, 9972997738, ಹಿರಿಯೂರು-6362474421, ಹೊಳಲ್ಕೆರೆ-08191-200021, ಹೊಸದುರ್ಗ-9972385061, ಮೊಳಕಾಲ್ಮುರು-9743085676 ಹಾಗೂ ರಾಜ್ಯಮಟ್ಟದ ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ರಮೇಶ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ತಹಶೀಲ್ದಾರ್ ಗೋವಿಂದರಾಜು, ನಗರಸಭೆ ಸದಸ್ಯೆ ಶ್ರೀದೇವಿ ಚಕ್ರವರ್ತಿ, ಪೌರಾಯುಕ್ತೆ ಲಕ್ಷ್ಮಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು, ಗಣತಿದಾರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now