ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಅ. 09 : ಅ. 23ರಂದು ನಡೆಯಲಿರುವ ಆಗ್ನೇಯ ಪದವೀಧರರ ಚುನಾವಣೆಯ ಹಿನ್ನಲೆಯಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಭವನದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಕೆ.ಎಂ. ಸುರೇಶ್‍ರವರ ಪರವಾಗಿ ಮಾಜಿ ಸಚಿವರಾದ ಸುರೇಶ್ ಕುಮಾರ್ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಮಾಜಿ ಎಂ.ಎಲ್.ಸಿ. ಡಾ.ಶಿವಯೋಗಿ ಸ್ವಾಮಿ, ರಾಜ್ಯ ವಕೀಲರ ಪ್ರಕೋಷ್ಟದ ಸಂಚಾಲಕರಾದ ವಸಂತಕುಮಾರ್, ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ಕಾರ್ಯದರ್ಶಿ ಶ್ರೀಮತಿ ರಜನಿ, ವಕೀಲರ ಸಂಘದ ಅಧ್ಯಕ್ಷರಾದ ಮಹೇಶ್ವರಪ್ಪ, ಉಪಾಧ್ಯಕ್ಷ ಶ್ರೀಮತಿ ಸಾವಿತ್ರಿ, ಕಾರ್ಯದರ್ಶಿ ಜಗದೀಶ್ ಜೆಡಿಎಸ್‍ನ ಪ್ರತಾಪ್ ಜೋಗಿ, ಆಶೋಕ ಬೆಳಗಟ್ಟ ಸೇರಿದಂತೆ ಇತರರು ಉಪಸ್ಥಿತರಿದ್ದರು










