ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ನಗರದ ಆನೆಬಾಗಿಲು ಸಮೀಪವಿರುವ ಗಣಪತಿ ಹಾಗೂ ಆಂಜನೇಯಸ್ವಾಮಿ, ವೆಂಕಟೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಯಿತು.
ನೂರಾರು ಭಕ್ತರು ಧಾವಿಸಿ ಗಣಪತಿ ಹಾಗೂ ಆಂಜನೇಯನ ದರ್ಶನ ಪಡೆದು ಶ್ರದ್ದಾ ಭಕ್ತಿಯನ್ನು ಸಮರ್ಪಿಸಿ ಶ್ರೀರಾಮನ ಜಪ ಮಾಡಿದರು.
ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದ ಮುಂಭಾಗ ಶ್ರೀರಾಮನ ಬೃಹಧಾಕಾರವಾದ ಪೋಟೋ ಇಟ್ಟು ಪೂಜೆ ಸಲ್ಲಿಸಲಾಯಿತು. ಕೋಟೆ ರಸ್ತೆಯಲ್ಲಿರುವ ಮಲ್ಲಿಕಾರ್ಜುನಸ್ವಾಮಿ ಹಾಗೂ ಬರಗೇರಮ್ಮ, ನೀಲಕಂಠೇಶ್ವರಸ್ವಾಮಿ ದೇವಾಲಯಗಳಲ್ಲಿ ಪೂಜೆ ನಡೆಯಿತು. ಬಹುತೇಕ ದೇವಾಲಯಗಳಲ್ಲಿ ಕೋಸಂಬರಿ ಪಾನಕ ವಿತರಿಸಲಾಯಿತು.
ನಗರದ ಮುಖ್ಯ ರಸ್ತೆಗಳಲ್ಲಿ ಶ್ರೀರಾಮನ ಭಾವಚಿತ್ರವಿರುವ ಕೇಸರ ಭಾವುಟಗಳು ರಾರಾಜಿಸಿದವು. ಅಲ್ಲಲ್ಲಿ ಆಟೋ ನಿಲ್ದಾಣ, ವಾಣಿಜ್ಯ ಮಳಿಗೆಗಳ ಮೇಲೆ ಹಾಗೂ ವಿದ್ಯುತ್ ಕಂಬಗಳಿಗೆ ಶ್ರೀರಾಮನ ಫೋಟೋ ಕಟ್ಟಿ ಪೂಜಿಸಲಾಯಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















