ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ತಮ್ಮ ಎರಡನೆ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರಿಗೆ ಸಚಿವ ಸ್ಥಾನ ನೀಡುವಂತೆ ರಂಗಸ್ವಾಮಿ ಛಲವಾದಿ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನಿಧನದಿಂದ ಜಿಲ್ಲೆ ಸಚಿವರಿಲ್ಲದೆ ಬಡವಾಗಿದೆ. ಹಾಗಾಗಿ ಶಾಸಕ ಕೆ.ಸಿ.ವೀರೇಂದ್ರಪಪ್ಪಿಗೆ ಮಂತ್ರಿ ಸ್ಥಾನ ನೀಡಬೇಕೆಂದು ರಂಗಸ್ವಾಮಿ ಛಲವಾದಿ ಕಾಂಗ್ರೆಸ್ ನಾಯಕರುಗಳಲ್ಲಿ ಒತ್ತಾಯಿಸಿದ್ದಾರೆ.










