ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 05 : ಶ್ರಾವಣ ಮಾಸದ ಮಂಗಳವಾರದಂದು ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ವಿಶೇಷವಾಗಿ ಅಲಂಕರಿಸಿ ಶ್ರದ್ದಾ ಭಕ್ತಿಯಿಂದ ಪೂಜಿಸಲಾಯಿತು.
ಮಲ್ಲಿಗೆ ಸುಗಂಧರಾಜ, ಕನಕಾಂಬರ, ಗುಲಾಬಿ, ಸೇವಂತಿಗೆ, ಹಸಿರು ಪತ್ರೆಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಕಣಿವೆಮಾರಮ್ಮನ ಅಲಂಕಾರವನ್ನು ಕಣ್ತುಂಬಿಕೊಂಡರು.















