ಸುದ್ದಿಒನ್, ಚಿತ್ರದುರ್ಗ, ಮೇ. 13 : ಸಿ.ಬಿ.ಎಸ್.ಈ 10ನೆ ತರಗತಿಯ ಫಲಿತಾಂಶದಲ್ಲಿ ಸುತ್ತ ಮುತ್ತಲಿನ ನಾಲ್ಕಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ಪ್ರಥಮ ಸ್ಥಾನ ಪಡೆದ ಚಿತ್ರದುರ್ಗ ಮತ್ತು ಚಳ್ಳಕೆರೆಯ ಶಿಕ್ಷಣ ಸಂಸ್ಥೆಯಾದ ಎಸ್.ಆರ್.ಎಸ್ ಹೆರಿಟೇಜ್ ಶಾಲೆ ಸತತ 8ನೆ ವರ್ಷವೂ ಶೇಖಡ 100ಕ್ಕೆ 100%ಫಲಿತಾಂಶ ದಾಖಲಿಸಿ ಜಿಲ್ಲೆಗೆ ಮತ್ತು ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತಂದಿದ್ದಾರೆ. ಈ ಮೂಲಕ ಶಿಕ್ಷಕರ ಪರಿಶ್ರಮಕ್ಕೆ ಧನಾತ್ಮಕವಾಗಿ ಸ್ಪಂದಿಸಿದ್ದಾರೆ.
ವಿದ್ಯಾರ್ಥಿಗಳಾದ
ಧವನ್ S ರೆಡ್ಡಿ 99%
ವಿನಯ್ K J 96%
ಪ್ರಿಯಾಂಕ S R 95.4%
ಮಂಜುನಾಥ್ R 95%
ಸಾನಿಕ T ಮೂರ್ತಿ 95% ಹೆಚ್ಚು ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಒಟ್ಟು 86 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನೊಂದಿಗೆ ಅಗ್ರಸ್ಥಾನದಲ್ಲಿದ್ದು ಈ ಫಲಿತಾಂಶವು ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತಂದಿರುವುದರೊಂದಿಗೆ ಶಾಲೆಯ ಹೆಸರನ್ನು ಜಿಲ್ಲಾಮಟ್ಟದಲ್ಲಿ ರಾರಾಜಿಸುವಂತೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ.
ಈ ಫಲಿತಾಂಶದಿಂದ ಹಾಗೂ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಶ್ರೀ ಬಿ.ಎ. ಲಿಂಗಾರೆಡ್ಡಿ,ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಅಮೋಘ್ ಬಿ.ಎಲ್ ಉಪಾಧ್ಯಕ್ಷರು, ಡಾ|| ರವಿ ಟಿ.ಎಸ್ ಸಂಸ್ಥೆಯ ಆಡಳಿತಾಧಿಕಾರಿಗಳು,ಪ್ರಾಂಶುಪಾಲರುಗಳಾದ ಪ್ರಭಾಕರ್ ಎಂ.ಎಸ್ (ಚಿತ್ರದುರ್ಗ) ಮತ್ತು ವಿಜಯ್ ಬಿ. ಎಸ್ (ಚಳ್ಳಕೆರೆ) ಹಾಗೂ ಶಾಲೆಯ ಶಿಕ್ಷಕವೃಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಶುಭಾಶಯ ಕೋರಿ ಅಭಿನಂದಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







