Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಎಸ್‍ಎಸ್‍ಎಲ್‍ಸಿ ಫಲಿತಾಂಶ : ಜಿಲ್ಲೆಗೆ ಶೇ.96.8 ಫಲಿತಾಂಶ, ರಾಜ್ಯಕ್ಕೆ ಪ್ರಥಮ ಸ್ಥಾನ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.8:
ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಚಿತ್ರದುರ್ಗ ಜಿಲ್ಲೆ ಶೇ.96.8ರಷ್ಟು ದಾಖಲೆಯ ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.

ಜಿಲ್ಲೆಯಲ್ಲಿ ಈ ಬಾರಿ ಪರೀಕ್ಷೆ ಬರೆದ 21995 ವಿದ್ಯಾರ್ಥಿಗಳು ಪೈಕಿ 21300 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.96.8 ಫಲಿತಾಂಶ ಲಭಿಸಿದೆ. 2021-22ನೇ ಸಾಲಿನಲ್ಲಿ ಶೇ.94.3 ದಾಖಲಿಸಿತ್ತು. ಪ್ರಸ್ತುತ ವರ್ಷದ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ.2.49ರಷ್ಟು ಹೆಚ್ಚಳವಾಗಿರುತ್ತದೆ.

20978 ವಿದ್ಯಾರ್ಥಿಗಳು ಉತ್ತೀರ್ಣ: ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ 21898 ವಿದ್ಯಾರ್ಥಿಗಳ ಪೈಕಿ 10458 ಬಾಲಕರು ಹಾಗೂ 10520 ಬಾಲಕಿಯರು ಸೇರಿ ಒಟ್ಟು 20978 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಚಳ್ಳಕೆರೆ ತಾಲ್ಲೂಕಿನಲ್ಲಿ 2275 ಬಾಲಕರು ಹಾಗೂ 2164 ಬಾಲಕಿಯರು ಸೇರಿ ಒಟ್ಟು 4439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 2861 ಬಾಲಕರು ಹಾಗೂ 2891 ಬಾಲಕಿಯರು ಸೇರಿ ಒಟ್ಟು 5752 ವಿದ್ಯಾರ್ಥಿಗಳು ಉತ್ತೀರ್ಣರಾಗಿದಾರೆ.

ಹಿರಿಯೂರು ತಾಲ್ಲೂಕಿನಲ್ಲಿ 1677 ಬಾಲಕರು ಹಾಗೂ 1681 ಬಾಲಕಿಯರು ಸೇರಿ ಒಟ್ಟು 3358 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹೊಳಲ್ಕೆರೆ ತಾಲ್ಲೂಕಿನಲ್ಲಿ 1168 ಬಾಲಕರು ಹಾಗೂ 1343 ಬಾಲಕರು ಸೇರಿ ಒಟ್ಟು  2511 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹೊಸದುರ್ಗ ತಾಲ್ಲೂಕಿನಲ್ಲಿ 1478 ಬಾಲಕರು ಹಾಗೂ 1455 ಬಾಲಕಿಯರು ಸೇರಿ ಒಟ್ಟು 2933 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 999 ಬಾಲಕರು ಹಾಗೂ 986 ಬಾಲಕಿಯರು ಸೇರಿ ಒಟ್ಟು 1985 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ತಿಳಿಸಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

error: Content is protected !!