Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಡಿಸಿ ಹೆಸರಲ್ಲೇ ಲಕ್ಷ ಲಕ್ಷ ದುರಪಯೋಗ ಮಾಡಿದ ಸಿಬ್ಬಂದಿ..!

---Advertisement---

ಸುದ್ದಿಒನ್, ಚಿತ್ರದುರ್ಗ: ಅಧಿಕಾರಿಗಳು, ಸಚಿವರು, ಶಾಸಕರ ಹೆಸರಲ್ಲೇ ವಂಚನೆ‌ ಮಾಡುವವರಿದ್ದಾರೆ. ಸ್ವಲ್ಪವೂ ಭಯವೇ ಇಲ್ಲದೆ. ಚಿತ್ರದುರ್ಗದಲ್ಲಿ ಡಿಸಿ, ಎಡಿಸಿ ಹೆಸರನ್ನ ಬಳಸಿಕೊಂಡು ನಗರಾಭಿವೃದ್ಧಿ ಕೋಶದ ಸಿಬ್ಬಂದಿ ಲಕ್ಷ ಲಕ್ಷ ದೋಚಿದ್ದಾರೆ. ಆ ಪ್ರಕರಣ ಹೊರಬಂದು ಈಗ ಜೈಲಿನಲ್ಲಿ ಕೂರುವಂತಾಗಿದೆ ಆ ಐವರು ಸಿಬ್ಬಂದಿಗಳು. ಜಿಲ್ಲಾಧಿಕಾರಿ ಹಾಗೂ ಎಡಿಸಿ ಅವರ ಡಿಜಿಟಲ್ ಸಹಿಯನ್ನ ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಿ, ಈ ರೀತಿ ಹಣ ದೋಚಿದ್ದಾರೆ.

ಈ ಸಂಬಂಧ ಈಗಾಗಲೇ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ನಗರಾಭಿವೃದ್ಧಿ ಕೋಶ್ ಸಿಟಿ ಲೆವೆಲ್ ಟೆಕ್ನಿಕಲ್ ಸೆಲ್ ಸಿಬ್ಬಂದಿಗಳ ವೇತನದ ಹೆಸರಿನಲ್ಲಿ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ನಕಲಿ ಬಿಲ್ ಸಲ್ಲಿಸಿರುವುದು ತಿಳಿದು ಬಂದಿದೆ. ಖಜಾನೆ ಇಲಾಖೆಯು ಡಿಜಿಟಲ್ ಸಹಿ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿದ ಹಿನ್ನೆಲೆ ಈ ಅಕ್ರಮ ಬೆಳಕಿಗೆ ಬಂದಿದೆ.

ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ನೀಡಿದ ದೂರಿನ ಆಧಾರದ ಮೇಲೆ ಹೊರಗುತ್ತಿಗರ ನೌಕರರಾದ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ್, ಮೆಹಬೂಬ್ ಭಾಷಾ ಹಾಗೂ ವಿಎಂಹೆಚ್ ಎಂಟರ್ಪ್ರೈಸಸ್ ನ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಸೈಯದ್ ಸಾದಿಕ್ ಪರಾರಿಯಾಗಿದ್ದಾನೆ. ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಸಹಿ ಸರ್ಟಿಫಿಕೇಟ್ ಕೀ ಕಳವು ಮಾಡಿ ದುರುಪಯೋಗ ಪಡೊಸಿಕೊಂಡಿರುವ ಆರೋಪವೂ ಹೊರ ಬಂದಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ, ಸಂಬಂಧಪಟ್ಟವರ ವಿರುದ್ಧ ಕಾನೂನು ಸಮರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now