Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ರಾಜ್ಯ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

---Advertisement---

 

ಚಿತ್ರದುರ್ಗ. ಜ.01: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರಕಟಿಸಲಾಗಿರುವ ನೂತನ ವರ್ಷ 2026 ರ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಗುರುವಾರದಂದು ಬಿಡುಗಡೆ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘದ 2026 ರ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.  ಸರ್ಕಾರಿ ನೌಕರರು ನೂತನ ಕ್ಯಾಲೆಂಡರ್ ವರ್ಷದಲ್ಲಿ ಶ್ರದ್ಧೆ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು.  ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಕೂಡ ಎಲ್ಲ ಸರ್ಕಾರಿ ನೌಕರರಿಗೆ ನೂತನ ವರ್ಷದ ಶುಭಾಶಯ ಕೋರಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದ್ದಜ್ಜಿ, ಹಿರಿಯೂರು ತಾಲ್ಲೂಕು ಅಧ್ಯಕ್ಷ ರಮೇಶ್ ಸೇರಿದಂತೆ ಮಲ್ಲಿಕಾರ್ಜುನ್, ಶ್ರೀನಿವಾಸ್, ಬಾಗೇಶ್ ಉಗ್ರಾಣ ಹಾಗೂ ಸಂಘದ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...