Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಅ.19 ರಂದು ರಾಜ್ಯ ಮಟ್ಟದ ವಿಕಲಚೇತನರ ಸಮಾವೇಶ: 1 ಲಕ್ಷ ಸಹಿ ಸಂಗ್ರಹ ಅಭಿಯಾನ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ರಾಜ್ಯ ಮಟ್ಟದ ವಿಕಲಚೇತನರ ಸಮಾವೇಶ ಹಾಗೂ ಒಂದು ಲಕ್ಷ ಸಹಿ ಸಂಗ್ರಹ ಅಭಿಯಾನವನ್ನು ಅ.19 ರಂದು ಬೆಳಿಗ್ಗೆ 10-30 ಕ್ಕೆ ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಸಲಾಗುವುದೆಂದು ವಿಕಲಚೇತನರ ಅಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಮಹಾಂತೇಶ್ ಬ್ರಹ್ಮ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ನೀಡುತ್ತಿರುವ ರಾಜ್ಯ ಸರ್ಕಾರ ಅಂಗವಿಕಲರಿಗೆ ಕೇವಲ ಎಂಟು ನೂರು ರೂ. ಮಾಶಾಸನ ಕೊಡುತ್ತಿರುವುದು ಯಾವ ನ್ಯಾಯ.? ಆರು ನೂರು ರೂ.ಗಳನ್ನು ಪಾವತಿಸಿದರೆ ನೂರು ಕಿ.ಮೀ. ವ್ಯಾಪ್ತಿಯೊಳಗೆ ಪ್ರಯಾಣಿಸಲು ಬಸ್ ಪಾಸ್ ನೀಡುತ್ತಿದೆ. ವಿಕಲಚೇತನರ ವಿವಾಹ ಪ್ರೋತ್ಸಾಹ ಧನ ಕೇವಲ ಐದು ಸಾವಿರ ರೂ.ಗಳು. ಆಧಾರ್ ಕಾರ್ಡ್ ತೋರಿಸಿ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ವಿಕಲಚೇತನರಿಗೆ ಮಾಸಿಕ ಆರು ಸಾವಿರ ರೂ.ಗಳನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದೆಂದು ಹೇಳಿದರು.

ಹದಿನೆಂಟು ಲಕ್ಷ ವಿಕಲಚೇತನರು ರಾಜ್ಯದಲ್ಲಿದ್ದಾರೆ. ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ಅಂಗವಿಕಲರಿಗೆ ತಾರತಮ್ಯವೆಸಗುತ್ತಲೆ ಬರುತ್ತಿವೆ. ನಮ್ಮ ಹಕ್ಕೊತ್ತಾಯಗಳನ್ನು ಸರ್ಕಾರದ ಗಮನಕ್ಕೆ ತರಬೇಕಾಗಿರುವುದರಿಂದ ವಿಕಲಚೇತನರು ಹಾಗೂ ಪೋಷಕರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮಹಾಂತೇಶ ಬ್ರಹ್ಮ ಮನವಿ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now