Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಎಪಿಎಂಸಿ ಆವರಣದಲ್ಲಿ ಸ್ವಚ್ಛತೆ ಹಾಗೂ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 23 : ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಪ್ರಾಂಗಣದಲ್ಲಿ ಸ್ವಚ್ಛತೆ ಕಾಪಾಡುವುದು ಸೇರಿದಂತೆ ವಿವಿಧ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾರುಕಟ್ಟೆಯ ಎಲ್ಲಾ ದಲ್ಲಾಲರು ಹಾಗೂ ಖರೀದಿದಾರರಿಗೆ ಎಪಿಎಂಸಿ ಕ್ಯಾರ್ಯದರ್ಶಿಯವರು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರು ನಾಳೆ          ‌‌‌        ( ದಿನಾಂಕ:24-9-2026 ರಂದು) ಚಿತ್ರದುರ್ಗ ತಾಲ್ಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ನೀಡಲಿರುವುದರಿಂದ ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ತಿಳಿಯಪಡಿಸಲಾಗಿದೆ.

1) ತಮ್ಮ ತಮ್ಮ ಗೋದಾಮುಗಳ ಮುಂಭಾಗದಲ್ಲಿ ಮತ್ತು ಚರಂಡಿಗಳಲ್ಲಿರುವ ಕಸ-ಕಡ್ಡಿಗಳನ್ನು ಈ ದಿನವೇ ಸ್ವಚ್ಚಗೊಳಿಸಿಕೊಳ್ಳಲು ತಿಳಿಯಪಡಿಸಲಾಗಿದೆ.

2) ತಾವು ಹೊಂದಿರುವ ಎಲೆಕ್ಟ್ರಾನಿಕ್ ತೂಕದ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು, ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಸತ್ಯಾಪನೆ ಮಾಡಿಸಿಕೊಂಡು ರೈತರ ಹುಟ್ಟುವಳಿಗಳ ತೂಕದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಕಾರ್ಯನಿರ್ವಹಿಸಲು ತಿಳಿಯಪಡಿಸಲಾಗಿದೆ.

3) ತಮ್ಮ ಅಂಗಡಿಯ ಕೆಲಸ ಕಾರ್ಯಗಳಿಗೆ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳಬಾರದಾಗಿ ಸೂಚಿಸಿದೆ.

ಈ ಬಗ್ಗೆ ನ್ಯೂನ್ಯತೆಗಳು ಕಂಡುಬಂದಲ್ಲಿ ತಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now