Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 13 : ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯಾದ ನೌಮನ್ ಅಹಮ್ಮದ್ ಷರೀಫ್ ಚಿತ್ರದುರ್ಗ ಜಿಲ್ಲೆಯ 17 ವರ್ಷದೊಳಗಿನ ಅಥ್ಲೆಟಿಕ್ಸ್ ವಿಭಾಗದ ರಾಜ್ಯಮಟ್ಟದಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 10ನೇ ತಗರತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೌಮನ್ ಅಹಮ್ಮದ್ ಷರೀಫ್, ಕೋಲಾರ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಮಟ್ಟದ 17 ವರ್ಷದ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ 400ಮೀ ಹರ್ಡಲ್ಸ್‍ನಲ್ಲಿ (57.91 ಸೆಕಂಡ್) ದ್ವಿತೀಯ ಸ್ಥಾನ ಪಡೆದು, ನವೆಂಬರ್ 26 ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿರುವ ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ನೌಮನ್ ಅಹಮ್ಮದ್ ಷರೀಫ್‍ಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ಶ್ರೀ.ಎಸ್.ಎಂ ಪೃಥ್ವೀಶ ಹಾಗೂ ಶ್ರೀಮತಿ ಸುನಿತಾ.ಪಿ.ಸಿ ವ್ಯವಸ್ಥಾಕಪ ನಿರ್ದೇಶಕರುಗಳು, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ, ಐಸಿಎಸ್‍ಇ ಉಪಪ್ರಿನ್ಸಿಪಾಲರಾದ ಅವಿನಾಶ್ ಬಿ, ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment