
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಜ್ರಮ ನಡೆಸಲಿರುವ ಪ್ರಧಾನಿ ಮೋದಿ. ದೆಹಲಿಯ ತಾಲ್ ಕಟೋರಾ ಸ್ಟೇಡಿಯಂ ನಲ್ಲಿ ಈ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ರಾಜ್ಯಗಳಿಂದ ಮಕ್ಕಳು ಭಾಗಿಯಾಗಲಿದ್ದಾರೆ. ನೇರವಾವಿ ಪ್ರಧಾನಿ ಮೋದಿ ಅವರ ಜೊತೆಗೆ ಮಾತನಾಡುವ ಅವಕಾಶ ಪಡೆದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿ ಮಿಥುನ್ ನಾಯ್ಕ್ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಜಿಲ್ಲೆಯ ತುಪ್ಪದಹಳ್ಳಿಯ ಮಿಥುನ್, ಹೊಳಲ್ಕೆರೆ ತಾಲೂಕಿನಲ್ಲಿ ವಿದ್ಯಾರ್ಥಿ ನಿಲಯದಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಮಿಥುನ್ ಕೂಡ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.
ಶೈಕ್ಷಣಿಕ ವರ್ಷ ಮುಗಿಯುತ್ತಾ ಬರುತ್ತಿದೆ. ಎಸ್ಎಸ್ಎಲ್ಸಿ, ಪಿಯುಸಿ ಹೀಗೆ ಹಲವು ಪರೀಕ್ಷೆಗಳು ವಿದ್ಯಾರ್ಥಿಗಳು ಭವಿಷ್ಯದ ಮುಖ್ಯ ಘಟ್ಟದಲ್ಲಿ ನಿಂತಿದ್ದಾರೆ. ಈ ವೇಳೆ ಮಕ್ಕಳಿಗೆ ಒಂದಷ್ಟು ಧೈರ್ಯ, ಒಂದಷ್ಟು ಸ್ಪೂರ್ತಿ ಬೇಕಾಗಿರುತ್ತದೆ. ಇದೀಗ ಪ್ರಧಾನಿ ಮೋದಿಯವರ ಬಳಿ ಪರೀಕ್ಷೆಯ ಬಗ್ಗೆ, ಮುಂದಿನ ಶಿಕ್ಷಣದ ಬಗ್ಗೆ ಮಕ್ಕಳು ತಮಗಿರುವ ಪ್ರಶ್ನೆಗಳಿಗೆ ಉತ್ತರ ಪಡೆಯಲಿದ್ದಾರೆ.

GIPHY App Key not set. Please check settings