Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: 6,000ಕ್ಕೂ ಹೆಚ್ಚು ಮಣ್ಣಿನ ಹಣತೆ ಬೆಳಗಿ ಪರಿಸರ ಸ್ನೇಹಿ ದೀಪಾವಳಿ ಆಚರಿಸಿದ ಪಾರ್ಶ್ವನಾಥ ಶಾಲಾ ಮಕ್ಕಳು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 07 : ನಗರದ ಧರ್ಮ ಶಾಲಾ ರಸ್ತೆಯಲ್ಲಿನ ಶ್ರೀ ಪಾರ್ಶ್ವನಾಥ ವಿದ್ಯಾ ಸಂಸ್ಥೆಯಲ್ಲಿ ದೀಪಾವಳಿಯ ಅಂಗವಾಗಿ ಶನಿವಾರ 6000ಕ್ಕೂ ಹೆಚ್ಚು ಹಣತೆಯನ್ನು ಮಕ್ಕಳಿಂದ ಹಚ್ಚುವುದರ ಮೂಲಕ ಆಡಳಿತ ಮಂಡಳಿಯರು ದೀಪಾವಳಿಯನ್ನು ಅಚರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ಕುಮಾರ್ ಮಾತನಾಡಿ ಪ್ರತಿ ವರ್ಷ ದಂತೆ ಈ ವರ್ಷವೂ ಜಿಲ್ಲೆಯಾದ್ಯಂತ ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಪರಿಸರಕ್ಕೆ ಮಾಡುತ್ತಿವೆ. ಇದರಿಂದ ಜನರ ಆರೋಗ್ಯವೂ ಹದಗೆಡುತ್ತಿದ್ದು, ಪ್ರಾಣಿ-ಪಕ್ಷಿಗಳಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸರಳ ರೀತಿಯಲ್ಲಿ ಹಾಗೂ ಮಾಲಿನ್ಯ ರಹಿತವಾಗಿ ಆಚರಿಸಬೇಕೆಂದು ಮನವಿ ಮಾಡಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಅಧಿಕೃತ ಹಾಗೂ ಅನುಮೋದಿತ ಮಾರಾಟಗಾರರಿಂದ ಖರೀದಿಸಬೇಕಾಗಿದೆ. ಎಂದು ತಿಳಿಸಿದರು.

ಈ ಕಾರ್ಯಕ್ರಮವನ್ನು ಸಂಸ್ಥೆಯ ಉಪಾಧ್ಯಕ್ಷರಾದ ಮುಖೇಶ್ ಸೋನುವಾಡಿಯ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ತುಂಬೆಲ್ಲಾ ಮಣ್ಣಿನ ಹಣತೆಗಳಲ್ಲಿ ಸಾಲು ಸಾಲಾಗಿ ಇಟ್ಟು ಅದಕ್ಕೆ ಮಕ್ಕಳಿಂದ ದೀಪವನ್ನು ಹಚ್ಚುವುದರ ಮೂಲಕ ದೀಪಾವಳಿಯನ್ನು ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

ಈ ಸಮಯದಲ್ಲಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ನಾಜಿಮಾ ಸ್ವಾಲೇಹಾ, ಫ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಜನಕರೆಡ್ಡಿ, ವ್ಯವಸ್ಥಾಪಕರಾದ ವಿಜಯ್ ಕುಮಾರ್, ಚಿತ್ರ ಕಲಾವಿದ ನಾಗರಾಜ್ ಬೇದ್ರೇ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now