ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.25 : ವೀರ ಸೇನಾನಿ ದೇಶಭಕ್ತ ಭಾರತ ಕಂಡಂತ ಅತ್ಯದ್ಬುತ ರಾಜಕಾರಣಿ ನೇತಾಜಿ ಸುಭಾಷ್‍ಚಂದ್ರ ಬೋಸ್ ಎಂದು ಲೇಖಕ ಹೆಚ್.ಆನಂದ್‍ಕುಮಾರ್ ಹೇಳಿದರು.
ರೋಟರಿ ಕ್ಲಬ್‍ನಿಂದ ರೋಟರಿ ಬಾಲಭವನದಲ್ಲಿ ಬುಧವಾರ ನಡೆದ ನೇತಾಜಿ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆ ಉದ್ಗಾಟಿಸಿ ಮಾತನಾಡಿದರು.
ಸಾವಿರಾರು ವರ್ಷಗಳ ಗುಲಾಮಗಿರಿಯಿಂದ ಭಾರತವನ್ನು ರಕ್ಷಿಸುವಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್‍ರವರ ಶ್ರಮ ಅಪಾರ, ಕಟಕ್‍ನಲ್ಲಿರುವ ಅವರ ಮನೆಯಲ್ಲಿ ಸುಭಾಷ್ ಚಂದ್ರಬೋಸ್ ಹುಟ್ಟಿದ ಕೊಠಡಿಗೆ ಹೋಗಿದ್ದೆ. ನನಗೆ ನೀವು ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆಂದು ಭಾರತೀಯರಿಗೆ ಕರೆ ಕೊಟ್ಟಿದ್ದರು ಅಂತಹ ಕೆಚ್ಚೆದೆಯ ನಾಯಕರು ಇಂದು ಸಿಗುವುದು ಕಷ್ಟ ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಕನಕರಾಜ್, ಜಂಟಿ ಕಾರ್ಯದರ್ಶಿ ಜಿ.ಎನ್.ವೀರಣ್ಣ, ಎಸ್.ವೀರೇಶ್, ವೀರಭದ್ರಸ್ವಾಮಿ, ವಿಶ್ವನಾಥಬಾಬು, ಡಾ.ತಿಪ್ಪೇಸ್ವಾಮಿ, ಜಯಶ್ರಿಷಾ, ಸೂರ್ಯನಾರಾಯಣ, ಪ್ರೀತಿ ಕನಕರಾಜ್, ನಾಗೇಂದ್ರಬಾಬು ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















