ಸುದ್ದಿಒನ್,ಚಿತ್ರದುರ್ಗ, ಜುಲೈ. 08 : ತಾಲ್ಲೂಕಿನ ಬಂಗಾರಕ್ಕನಹಳ್ಳಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಕು. ಸುಮಿತ್ರ ಎಸ್. ರೆಡ್ಡಿಯವರು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಕಲಾಕುಂಚ ಸಂಸ್ಥೆಯು ರಾಜ್ಯಮಟ್ಟದ ‘ಕನ್ನಡ ಕೌಸ್ತುಭ’ ಮತ್ತು ‘ಸರಸ್ವತಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಶ್ರೀ ಶ್ರೀನಿವಾಸ ರೆಡ್ಡಿ ಜೆ.ಟಿ. ಮತ್ತು ಶ್ರೀಮತಿ ತಿಪ್ಪಮ್ಮಕೆ ಸಿ. ದಂಪತಿಗಳ ಸುಪುತ್ರಿಯಾಗಿರುವ ಕು.ಸುಮಿತ್ರ ಅವರು ನಾಯಕನಹಟ್ಟಿಯ ವಿದ್ಯಾ ವಿಕಾಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ಅವರು ಇಡೀ ವಿಷಯಗಳಲ್ಲಿ ಬಹಳ ಉತ್ತಮ ಅಂಕಗಳನ್ನು ಗಳಿಸಿದ್ದಾರೆ.
ಕನ್ನಡದಲ್ಲಿ ಪೂರ್ಣ ಅಂಕ ಪಡೆದಿರುವುದು, ಭಾಷೆಯ ಮೇಲಿನ ಅವರ ಮೆಚ್ಚುಗೆ ಹಾಗೂ ಶ್ರಮದ ಸಫಲತೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಸುಮಿತ್ರ ಅವರ ಈ ಸಾಧನೆಗೆ ಶಾಲಾ ಮುಖ್ಯಗುರುಗಳು, ಶಿಕ್ಷಕವೃಂದ, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಇತರ ವಿದ್ಯಾರ್ಥಿಗಳಿಗೆ ಅವರು ಸ್ಪೂರ್ತಿದಾಯಕ ಉದಾಹರಣೆಯಾಗಿದ್ದಾರೆ.
ಕಲಾಕುಂಚ ಸಂಸ್ಥೆಯು 2025ರ ಜುಲೈ 20ರಂದು, ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ, ಹಮ್ಮಿಕೊಂಡಿರುವ ಸಮಾರಂಭದಲ್ಲಿ ಸುಮಿತ್ರ ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ. ಹೆಚ್. ಮಂಜುನಾಥ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















