ಸ್ಯಾಂಡಲ್ ವುಡ್ ದಿನೇ ದಿನೇ ಆಶ್ಚರ್ಯಕರ ವಿಚಾರಗಳು ಸದ್ದು ಮಾಡುತ್ತಿವೆ. ನಿನ್ನೆ ಮೊನ್ನೆಯೆಲ್ಲಾ ಡಿವೋರ್ಸ್ ಕೇಸ್ ಗಳು ಸದ್ದು ಮಾಡಿದ್ದವು. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿ ಶಾಕ್ ನೀಡಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಇಂದು ಬೆಳಗ್ಗೆ ಅವರ ಫಾರ್ಮ್ ಹೌಸ್ ನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಸ್ವಾಮೀಜಿ. ಕೆಟ್ಟದಾಗಿ ಮೆಸೇಜ್ ಮಾಡಿದ್ದಲ್ಲದೆ, ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದರಂತೆ. ಕಾಮಾಕ್ಷಿಪಾಳ್ಯ ವ್ಯಾಪ್ತಿಯ ಶೆಡ್ ನಲ್ಲಿ ಸ್ವಾಮೀಜಿಯ ಕೊಲೆ ಮಾಡಲಾಗಿದೆ.
ಜೂನ್ 8ರಂದು ರೇಣುಕಾಸ್ವಾಮಿ ಅವರ ಮರ್ಡರ್ ನಡೆದಿತ್ತು. ಕೊಲೆ ಮಾಡಿದ ಬಳಿಕ ಆ ಮೃತದೇಹವನ್ನು ಮೋರಿಗೆ ಬಿಸಾಡಲಾಗಿದೆ. ಜೂನ್ 9ರಂದು ಕಾಮಾಕ್ಷಿಪಾಳ್ಯ ಮೋರಿಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಸಿಕ್ಕಿದೆ. ಅಂದೇ ಮೂರು ಮಂದಿಯನ್ನು ಅರೆಸ್ಟ್ ಮಾಡಲಾಗಿತ್ತು. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ರೇಣುಕಾಸ್ವಾಮಿ ಕಾಲ್ ರೆಕಾರ್ಡ್ ಸೇರಿದಂತೆ ಹಲವು ರೀತಿಯಲ್ಲಿ ತನಿಖೆ ನಡೆಸಿದ್ದರು. ಅರೆಸ್ಟ್ ಆಗಿದ್ದ ಮೂವರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡಿದ್ದರು. ಮೂವರು ನೀಡಿದ್ದ ಹೇಳಿಕೆಯಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ಹೆಸರು ಕೇಳಿ ಬಂದಿತ್ತು. ಮೈಸೂರಿನ ಫಾರ್ಮ್ ಹೌಸ್ ನಲ್ಲಿದ್ದ ದರ್ಶನ್ ಅವರನ್ನು ಕೊಲೆ ಆರೋಪದಲ್ಲಿ ಬಂಧಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















