ಸುದ್ದಿಒನ್,ಚಿತ್ರದುರ್ಗ, ಜೂನ್. 20 : ಬೆಸ್ಕಾಂ ನಿವೃತ್ತ ಎಇಇ. ಟಿ.ಜಿ.ರಾಜಶೇಖರಪ್ಪ(94) ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ಭೀಮಸಮುದ್ರದ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರು ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜೂನ್ 21 ರಂದು ಮಧ್ಯಾಹ್ನ 12 ಗಂಟೆಗೆ ಭೀಮಸಮುದ್ರದಲ್ಲಿರುವ ಅವರ ತೋಟದಲ್ಲಿ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.










