ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 22 : 2026, ಮಾರ್ಚ್/ಏಪ್ರಿಲ್‍ನಲ್ಲಿ ನಡೆದ ಹತ್ತನೆ ತರಗತಿ ಪರೀಕ್ಷೆಯಲ್ಲಿ ಶೇ. 90 ಅಥವಾ ಹೆಚ್ಚು ಅಂಕಗಳನ್ನು ಪಡೆದಿರುವ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ. 85 ಅಥವಾ ಹೆಚ್ಚಿನ ಅಂಕಗಳನ್ನು ಗಳಿಸಿರುವ ಮತ್ತು ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಡಿಸ್ಟಿಂಕ್ಷನ್ ಪಡೆದಿರುವ ಜಿಲ್ಲಾ ಜಂಗಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ. ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲು ನಿರ್ಧರಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ದಿನಾಂಕ : 14-8-2026 ರ ಶುಕ್ರವಾರದ ಒಳಗಾಗಿ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಜಂಗಮ ಸಮಾಜ ಸಂಸ್ಥೆ, ಸೆಂಟ್ರಲ್ ಬ್ಯಾಂಕ್
ಆಫ್ ಇಂಡಿಯಾ ಬಿಲ್ಡಿಂಗ್, ಮೊದಲ ಮಹಡಿ, ಜೆ.ಸಿ.ಆರ್. ಸರ್ಕಲ್ ಚಿತ್ರದುರ್ಗ-577501 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ : 9449681797, 9449856955, 9448131666 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಜಂಗಮ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಸ್.ಷಡಾಕ್ಷರಯ್ಯ ತಿಳಿಸಿದ್ದಾರೆ.











