Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲೂಕಿನ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದ ಚಿತ್ರದುರ್ಗ ತಾಲ್ಲೂಕಿನ ಕುರುಬ ಸಮಾಜದ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ಕುರುಬ  ಸಮಾಜದ ಅರ್ಹ ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ತಮ್ಮ ವಿವರಗಳನ್ನು ಆಗಸ್ಟ್ 09ರ ಸಂಜೆ 5 ಗಂಟೆಯೊಳಗೆ ಫೋನ್ ನಂಬರ್ ಸಹಿತ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ. ಮಂಜುನಾಥ್ ಅವರ ಮೊಬೈಲ್ ಸಂಖ್ಯೆ, 9844412448 ಅಥವಾ ಪ್ರಧಾನ ಕಾರ್ಯದರ್ಶಿ ಹನುಮಂತಗೌಡ ಪೂಜಾರ್ ಅವರ ಮೊಬೈಲ್ ಸಂಖ್ಯೆ 9448339025 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now