Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಆಗಸ್ಟ್ 29 ರಂದು ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ : ಯಾವ್ಯಾವ ಕ್ರೀಡೆಗಳಿವೆ ? ಯಾರೆಲ್ಲಾ ಸ್ಪರ್ಧಿಸಬಹುದು ? ಇಲ್ಲಿದೆ ಸಂಪೂರ್ಣ ಮಾಹಿತಿ

---Advertisement---

 

ಸುದ್ದಿಒನ್, ಚಿತ್ರದುರ್ಗ. ಆ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರದಲ್ಲಿ ಪ್ರಸಕ್ತ ಸಾಲಿನ ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಗಸ್ಟ್ 29 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳು ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್ ಕ್ರೀಡೆಗಳು ನಡೆಯಲಿದ್ದು ಇದರಲ್ಲಿ ಎಲ್ಲಾ ವಯೋಮಾನದವರು ಭಾಗವಹಿಸಬಹುದಾಗಿರುತ್ತದೆ.

ಪುರುಷರಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳು : 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ. ರಿಲೇ, 4*400 ಮೀ. ರಿಲೇ ಕ್ರೀಡೆಗಳು ಇರಲಿವೆ.

ಮಹಿಳೆಯರಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳು :
100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ.ರಿಲೇ, 4*100 ಮೀ.ರಿಲೇ ಕ್ರೀಡೆಗಳು ಇರಲಿವೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂರವಾಣಿ ಸಂಖ್ಯೆ 08194-235635 ಹಾಗೂ ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ಅವರ ದೂರವಾಣಿ ಸಂಖ್ಯೆ 9611673475 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment