ಸುದ್ದಿಒನ್, ಚಿತ್ರದುರ್ಗ. ಆ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರದಲ್ಲಿ ಪ್ರಸಕ್ತ ಸಾಲಿನ ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಗಸ್ಟ್ 29 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳು ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್ ಕ್ರೀಡೆಗಳು ನಡೆಯಲಿದ್ದು ಇದರಲ್ಲಿ ಎಲ್ಲಾ ವಯೋಮಾನದವರು ಭಾಗವಹಿಸಬಹುದಾಗಿರುತ್ತದೆ.
ಪುರುಷರಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳು : 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ. ರಿಲೇ, 4*400 ಮೀ. ರಿಲೇ ಕ್ರೀಡೆಗಳು ಇರಲಿವೆ.
ಮಹಿಳೆಯರಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳು :
100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ.ರಿಲೇ, 4*100 ಮೀ.ರಿಲೇ ಕ್ರೀಡೆಗಳು ಇರಲಿವೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂರವಾಣಿ ಸಂಖ್ಯೆ 08194-235635 ಹಾಗೂ ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ಅವರ ದೂರವಾಣಿ ಸಂಖ್ಯೆ 9611673475 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















