Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ತಾಲ್ಲೂಕು ಮಟ್ಟದ ಕ್ರೀಡಾಕೂಟ: ನ್ಯಾಷನಲ್ ಇಂಗ್ಲಿಷ್ ಶಾಲೆ ಬಾಲಕರ ತ್ರೋಬಾಲ್ ತಂಡಗಳಿಗೆ ಪ್ರಥಮ ಸ್ಥಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಸರ್ಕಾರಿ ಬಿ.ಎಡ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ನ್ಯಾಷನಲ್ ಇಂಗ್ಲಿಷ್ ಶಾಲೆಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರ ತ್ರೋಬಾಲ್ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ.

ತಾಲ್ಲೂಕಿನ ವಿವಿಧ ಶಾಲೆಗಳ ಪ್ರಬಲ ತಂಡಗಳು ಪಾಲ್ಗೊಂಡಿದ್ದ ಈ ಪಂದ್ಯಾವಳಿಯಲ್ಲಿ ಆರಂಭದಿಂದಲೂ ಅತ್ಯುತ್ತಮ ಪ್ರದರ್ಶನ ತೋರಿದ ನ್ಯಾಷನಲ್ ಇಂಗ್ಲಿಷ್ ಶಾಲೆಯ ಆಟಗಾರರು, ರೋಚಕ ಫೈನಲ್ ಹಣಾಹಣಿಯಲ್ಲಿ ಎದುರಾಳಿ ತಂಡವನ್ನು ಮಣಿಸಿ ವಿಜಯದ ಕಿರೀಟ ಮುಡಿಗೇರಿಸಿಕೊಂಡರು.

ಶಾಲೆಗೆ ಕೀರ್ತಿ ತಂದ ವಿಜೇತ ತಂಡದ ಕ್ರೀಡಾಪಟುಗಳನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಮುಕ್ತಕಂಠದಿಂದ ಶ್ಲಾಘಿಸಿ, ಮುಂಬರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲೂ ಇದೇ ರೀತಿಯ ಅತ್ಯುತ್ತಮ ಸಾಧನೆ ತೋರಲಿ ಎಂದು ಶುಭ ಹಾರೈಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now