ಸುದ್ದಿಒನ್,ಚಿತ್ರದುರ್ಗ,ಮೇ.27: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಲಾರಿ ಮತ್ತು ಬೊಲೆರೊ ವಾಹನದ ನಡುವೆ ನಡೆದ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಯೊಂದು ಬೊಲೆರೊ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ಬೊಲೆರೊ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















