Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಭೀಕರ ರಸ್ತೆ ಅಪಘಾತ, ಮಗು ಮೃತ, ಆರು ಮಂದಿಗೆ ಗಾಯ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಜೂ.13) : ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಹೆಣ್ಣು ಮಗು ಮೃತಪಟ್ಟು ಮೂವರಿಗೆ ಗಂಭೀರ ಗಾಯಗಳಾಗಿವೆ.

ಹಿರಿಯೂರಿನ ರಾಷ್ಟ್ರೀಯ ಹೆದ್ದಾರಿ 48 ರ ಗ್ರಾಮಾಂತರ ಪೊಲೀಸ್ ಠಾಣೆ ಮುಂಭಾಗದಲ್ಲಿ ಇಂದು (ಜೂನ್.13) ಸಂಜೆ ಆರು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಚಿತ್ರದುರ್ಗದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆರು ವರ್ಷದ ಹೆಣ್ಣು ಮಗು ಇಮಾನ್ ಸೂನ್ (6) ಎಂದು ಗುರುತಿಸಲಾಗಿದೆ.

 

 

ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದ್ದು, ಮಾನರಾಂ, ಕಿರಣ್, ದಿವ್ಯ, ದೀಕ್ಷಿತಾ, ಚಂಚಲ್ ಗಾಯಗೊಂಡವರು ಅವರನ್ನು ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ.

ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...