ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಫೆ. 26 : ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ ಕಾರ್ಯಕ್ರಮವೂ ನೆರೆದಿದ್ದ ಅಸಂಖ್ಯಾಂತ ಭಕ್ತಾಧಿಗಳ ಸಮ್ಮುಖದಲ್ಲಿ ಶ್ರದ್ದಾ ಭಕ್ತಿಯಿಂದ ನಡೆಯಿತು.
ಬೆಳಿಗ್ಗೆ ಸ್ವಾಮಿಗೆ ಎಂದಿನಂತೆ ರುದ್ರಾಭೀಷೇಕ, ಸಹಸ್ರ ಬಿಲ್ವಾರ್ಚನೆ ಕಾರ್ಯಕ್ರಮ ನಡೆದಿದ್ದು, ಸಂಜೆ 4 ಗಂಟೆಗೆ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವದ ನಂತರ ಶ್ರೀ ಸ್ವಾಮಿಯ ರಥೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.

ರಥೋತ್ಸವದ ಅಂಗವಾಗಿ ರಾಜ್ಯದ ವಿವಿಧೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ಸಕ್ರಿಯ ಭಾಗವಹಿಸಿ ರಥವನ್ನು ಭಕ್ತಿಯಿಂದ ಎಳೆಯುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಕಂಕಣಧಾರಣೆ, ಆಶ್ವೋತ್ಸವ, ವೃಷಭೋತ್ಸವ ಕೆಂಡಾರ್ಚನೆಯಂತಹ ಕಾರ್ಯಕ್ರಮ ನಡೆಸಲಾಯಿತು.
ಜಾತ್ರೆಯ ಅಂಗವಾಗಿ ದೇವಾಲಯದ ಆವರಣದ ಸುತ್ತಾ-ಮುತ್ತಲ್ಲಿನ ಪ್ರದೇಶದಲ್ಲಿ ವಿವಿಧ ರೀತಿಯ ಆಟ ಸಾಮಾನು ಬೆಂಡು ಬೆತ್ತಾಸಿನ ಅಂಗಡಿಗಳನ್ನು ನಿರ್ಮಾಣ ಮಾಡಲಾಗಿತು.್ತ ಹೂಸದಾಗಿ ಮದುವೆಯಾದ ಜೋಡಿಗಳು ರಥದ ಕಲಶವನ್ನು ನೋಡಬೇಕು ಎನ್ನುವ ಪ್ರತೀತಿ ಇರುವುದರಿಂದ ಹಲವಾರು ಜೋಡಿಗಳೊಂದಿಗೆ ಮಕ್ಕಳು, ವಯೋವೃದ್ದರು, ಮಧ್ಯವಯಸ್ಕನವರು, ಹೆಂಗಸರು ಪುರುಷರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ಸಂಜೆಯಾಗುತ್ತಿದ್ದಯೇ ಸ್ವಾಮಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಕುಳ್ಳರಿಸಿ ದೇವಾಲಯದ ಆವರಣದಲ್ಲಿ ಮೂರು ಸುತ್ತು ಹಾಕುವುದರ ಮೂಲಕ ನಂತರ ರಥದಲ್ಲಿ ಕುಳ್ಳರಿಸಿದಾಗ ಆಗಮಿಸಿದ್ದ ಭಕ್ತಾಧಿಗಳು ರಥವನ್ನು ಎಳೆಯುವುದರ ಮೂಲಕ ಸ್ವಾಮಿಯ ರಥೋತ್ಸವವನ್ನು ಶ್ರದ್ದಾ ಭಕ್ತಿಯಿಂದ ನೇರವೇರಿಸಿದರು. ಈ ಸಂದರ್ಭದಲ್ಲಿ ಭಕ್ತಾಧಿಗಳಿಂದ ಮಾವಿನಹಳ್ಳಿ ಬಸವೇಶ್ವರ ಮಹಾರಾಜ್ ಕೀ ಜೈ ಎಂಬ ಘೋಷಣೆಗಳು ಕೇಳಿ ಬಂದವು.
ಸ್ವಾಮಿಯ ರಥೋತ್ಸವದ ಅಂಗವಾಗಿ ಫೆ.27 ರ ಸಂಜೆ 5ಕ್ಕೆ ಕಂಕಣ ವಿಸರ್ಜನೆ ಹಾಗೂ ಮಹಾ ಮಹಾಮಂಗಳಾ ರತಿಯೊಂದಿಗೆ ಸ್ವಾಮಿಯ ಸೇವಾ ಕಾರ್ಯಕ್ರಮ ಮುಕ್ತಾಯವಾಗಲಿದೆ.
ಈ ಭಾರಿಯ ಭಾವುಟವೂ ಒಂದು ಲಕ್ಷದ ಇಪ್ಪತೊಂದು ಸಾವಿರಕ್ಕೆ (1.51,001) ಎಕ್ಕೆಹಾರ 56.001, ಗುಲಾಬಿ ಹಾರ 36,001, ಪತ್ರೆ ಹಾರ 32.001, ಸೇಬಿನ ಹಾರ 35.001ಕ್ಕೆ ಹರಾಜಾಯಿತು. ಇದೇ ಸಂದರ್ಭದಲ್ಲಿ ಸ್ವಾಮಿಯ ಹತ್ತು ಹಾರಗಳನ್ನು ಹರಾಜು ಮಾಡಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಬೃಹನ್ಮಠದ ಶ್ರೀ ಬಸವಪ್ರಭು ಶ್ರೀಗಳು ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಬಿಜೆಪಿ ಮುಖಂಡರಾದ ಅನಿತ್ ಕುಮಾರ್ ಸೇರಿದಂತೆ Àುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಟ್ರಸ್ಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ನೆರಳಿನ ವ್ಯವಸ್ಥೆಯನ್ನು ಮಾಡಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಬಿಗಿ ಭದ್ರತೆಯನ್ನು ಮಾಡಲಾಗಿತ್ತು. ಚಿತ್ರದುರ್ಗ ಜಿಲ್ಲೆ ಅಲ್ಲದೆ ರಾಜ್ಯದ ವಿವಿಧೆ ಜಿಲ್ಲೆ ಹಾಗೂ ನೆರೆ ರಾಜ್ಯದಿಂದಲೂ ಸಹಾಗಳಿಂದ ಭಕ್ತಾಧಿಗಳು ಆಗಮಿಸುವುದರ ಮೂಲಕ ರಥೋತ್ಸವದಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.



