Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಜಿಲ್ಲಾ ಮಾದಿಗ ವಕೀಲರ ಬಳಗ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಜಿಲ್ಲಾ ಮಾದಿಗ ವಕೀಲರ ಬಳಗದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.

ನ್ಯಾಯಾಲಯದ ಆವರಣದಿಂದ ಮೆರವಣಿಗೆ ಮೂಲಕ ಆಗಮಿಸಿದ ವಕೀಲರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಒಳ ಮೀಸಲಾತಿ ಜಾರಿಗಾಗಿ ಕಳೆದ ಮೂವತ್ತು ವರ್ಷಗಳಿಂದಲೂ ಸತತ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿರುವುದು ಹೋರಾಟಕ್ಕೆ ಸಿಕ್ಕ ಫಲ. ಸಂವಿಧಾನದ ಪರಿಚ್ಚೇದ 15(4) 16(4) 341 ರಡಿಯನ್ವಯ ಜಾತಿ ಸಂಖ್ಯೆಗನುಗುಣವಾಗಿ ಒಳ ಮೀಸಲಾತಿಯನ್ನು ನಿಗಧಿಪಡಿಸಬೇಕೆಂಬ ಸಂವಿಧಾನದ ಆಶಯದಂತೆ ಸುಪ್ರೀಂಕೋರ್ಟ್ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯಗಳಿಗಿದೆಯೆಂದು ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುವಲ್ಲಿ ತಡ ಮಾಡುತ್ತ. ತೀರ್ಪಿನ ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಪ್ರತಿಭಟನಾನಿರತ ವಕೀಲರು ಒತ್ತಾಯಿಸಿದರು.

ವಕೀಲರುಗಳಾದ ಬೀಸ್ನಳ್ಳಿ ಜಯಣ್ಣ, ಶರಣಪ್ಪ, ಜಿ.ಕೆ.ಮಲ್ಲಿಕಾರ್ಜುನಸ್ವಾಮಿ, ಟಿ.ಹನುಮಂತಪ್ಪ, ಎಸ್.ವಿಜಯಕುಮಾರ್, ಎಂ.ಕೆ.ಲೋಕೇಶ್, ಎಸ್.ಕೆ.ಸುರೇಶ್‍ಬಂಜಗೆರೆ ಎಸ್.ದಯಾನಂದ್, ಕೆ.ವಿಶ್ವಾನಂದ ವದ್ದಿಕೆರೆ, ಎಂ.ರಮೇಶ್, ರಘು, ನಾಗರಾಜ್, ಮಲ್ಲಿಕಾರ್ಜುನ್, ತಕ್ಷಶಿಲ, ನೇತ್ರಾವತಿ, ಐಶ್ವರ್ಯ, ರಾಜಣ್ಣ, ಶಿಲ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...