ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11 : ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮನ ಮೆರವಣಿಗೆ ನಗರದಲ್ಲಿಂದು ವಿಜೃಂಭಣೆಯಿಂದ ನಡೆಯಿತು.

ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿವೃತ್ತ, ಲಕ್ಷ್ಮಿಬಜಾರ್ ಮೂಲಕ ಆನೆಬಾಗಿಲು ಉಚ್ಚಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗದಿಂದ ದೊಡ್ಡಪೇಟೆಯ ರಾಜಬೀದಿಯಲ್ಲಿ ಸಾಗಿತು.
ಬಣ್ಣ ಬಣ್ಣದ ಹೂವು ಹಾಗೂ ಹಾರಗಳಿಂದ ಮನಮೋಹಕವಾಗಿ ಬರಗೇರಮ್ಮನನ್ನು ಸಿಂಗರಿಸಲಾಗಿತ್ತು. ಸುಡುಬಿಸಿಲನ್ನು ಲೆಕ್ಕಿಸದೆ ಯುವಕರು ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದರು.
ಗೊಂಬೆ ಕುಣಿತ, ಸೋಮನ ಕುಣಿತ, ಡೊಳ್ಳು, ತಮಟೆ, ಉರುಮೆ ಸದ್ದಿಗೆ ಭಕ್ತರು ಹೆಜ್ಜೆ ಹಾಕುತ್ತಿದ್ದರು. ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಭಕ್ತರು ಪೂಜೆ ಸಲ್ಲಿಸಿ
ಬರಗೇರಮ್ಮನಿಗೆ ಭಕ್ತಿ ಸಮರ್ಪಿಸಿದರು.
















