ಸುದ್ದಿಒನ್, ಚಿತ್ರದುರ್ಗ, ನವೆಂಬರ್. 02 : ನಗರದ ಕೆಳಗೋಟೆ ನಿವಾಸಿ ಹಾಗೂ ನಿವೃತ್ತ ಶಿಕ್ಷಕ ಟಿ. ತಿಪ್ಪೇರುದ್ರ ರೆಡ್ಡಿ (80 ವರ್ಷ) ಇಂದು ಬೆಳಿಗ್ಗೆ 8.30 ರ ಸುಮಾರಿಗೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರರಾದ ಚಿತ್ರದುರ್ಗ ನಗರಸಭೆಯ ಮಾಜಿ ಸದಸ್ಯ ಈರುಳ್ಳಿ ರಾಘವೇಂದ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.











