ಚಿತ್ರದುರ್ಗ : ರಸ್ತೆ ಅಪಘಾತದಲ್ಲಿ‌ ಮೂವರು ಸಾವು

0 Min Read

 

ಸುದ್ದಿಒನ್, ಚಿತ್ರದುರ್ಗ, ಮೇ. 17 : : ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಬಳಿ ಶುಕ್ರವಾರ ಕಾರು-ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಮೃತರನ್ನು ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮದ
ಗಂಗಮ್ಮ (60 ವರ್ಷ) ಆಕೆಯ ಸೊಸೆ ಕಾವ್ಯಾ (30 ವರ್ಷ) ಮತ್ತು 2 ವರ್ಷದ ಮಗು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಅರೇಹಳ್ಳಿಯ ಉದ್ಯಮಿ ಯಶವಂತ್ ಕುಟುಂಬದವರೆಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಕಾವ್ಯಾ ಪತಿ ಯಶವಂತ್, ಮತ್ತೋರ್ವ ಮಗುಗೆ ಗಾಯವಾಗಿದ್ದು ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks