Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

---Advertisement---

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ (ಸು.21 ವರ್ಷ) ಎಂಬ ಯುವತಿ ಕಾಣೆಯಾದ ಕುರಿತು ಸೆ.19ರಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ರೇಣುಕಮ್ಮ ಸು.5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ಬಿಳಿ ಮಿಶ್ರಿತ ಬೂದು ಬಣ್ಣದ ನೈಟಿ ಧರಿಸಿರುತ್ತಾರೆ.

 

ಹೊಳಲ್ಕೆರೆ ತಾಲ್ಲೂಕಿನ ನಂದನ ಹೊಸೂರು ಗ್ರಾಮದ ನಿವಾಸಿ ವಿಜಯಮ್ಮ ಗಂಡ ಚಿತ್ರಶೇಖರ (ಸು.35ವರ್ಷ) ಸೆ.19ರಂದು ಕಾಣೆಯಾದ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವಿಜಯಮ್ಮ 5 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುವರು. ಬಲಗಣ್ಣು ಚಿಕ್ಕದಾಗಿದ್ದು, ಕಣ್ಣಿನಲ್ಲಿ ಬಿಳಿ ಹೂ ಇರುತ್ತದೆ. ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ನೈಟಿ ಧರಿಸಿರುತ್ತಾಳೆ.

ಹೊಳಲ್ಕೆರೆ ತಾಲ್ಲೂಕಿನ ತೊಡರನಾಳ್ ಗ್ರಾಮದ ದೀಪಾ ತಂದೆ ಪ್ರಕಾಶ್ (20ವರ್ಷ) ಯುವತಿ  ಸೆ.22ರಂದು ಕಾಣೆಯಾದ ಕುರಿತು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾದ ದೀಪಾ 5.2 ಅಡಿ ಎತ್ತರ, ಕೋಲು ಮುಖ, ಕಪ್ಪುಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವರು. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರದ ಟಾಪ್. ಅರಿಶಿಣ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಕಾಣೆಯಾದವರ ಕುರಿತು ಮಾಹಿತಿ ಕಂಡುಬಂದಲ್ಲಿ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment