ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 27 : ಲೋಕಸಭಾ ಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅನೌನ್ಸ್ ಮಾಡಿದೆ. ಎರಡನೇ ಪಟ್ಟಿ ಅನೌನ್ಸ್ ಮಾಡಿದಾಗಲೂ ಚಿತ್ರದುರ್ಗ ಕ್ಷೇತ್ರಕ್ಕೆ ಮಾತ್ರ ಯಾವುದೇ ಅಭ್ಯರ್ಥಿಯನ್ನು ಅನೌನ್ಸ್ ಮಾಡಿರಲಿಲ್ಲ. ಆಕಾಂಕ್ಷಿಗಳ ನಡುವೆ, ಯಾಕಿನ್ನು ಅನೌನ್ಸ್ ಮಾಡುತ್ತಿಲ್ಲ ಎಂಬುದೇ ಕಗ್ಗಂಟಾಗಿ ಉಳಿದಿತ್ತು. ಕಡೆಗೂ ಈಗ ಅಭ್ಯರ್ಥಿಯನ್ನು ಅನೌನ್ಸ್ ಮಾಡಿದೆ.
ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ.
ರಾಜ್ಯದ 27 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯ ಘೋಷಣೆ ಮಾಡಿದ್ದರು. ಆದರೆ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಯಲ್ಲಿ ಪರ ವಿರೋಧ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಹೈಕಮಾಂಡ್ ಗೆ ತಲೆ ನೋವಾಗಿ ಪರಿಣಮಿಸಿತ್ತು. ಈ ಎಲ್ಲದರ ಮಧ್ಯೆ ಬುಧವಾರ ಸಂಜೆ ಹೈಕಮಾಂಡ್ ಗೋವಿಂದ ಕಾರಜೋಳ ಅವರಿಗೆ ಮಣೆ ಹಾಕಿದೆ. ಮಾರ್ಚ್ 28ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಇತ್ತ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಬಿಎನ್ ಚಂದ್ರಪ್ಪ ಅವರು ಕಣಕ್ಕೆ ಇಳಿದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡಲಿದೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕೂಡ ಗಮನ ಸೆಳೆಯಲಿದೆ. ಗೆಲುವಿಗಾಗಿ ಸಾಕಷ್ಟು ಪ್ರಯತ್ನಗಳು ಎರಡೂ ಪಕ್ಷಗಳಿಂದ ನಡೆಯಲಿವೆ.