Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಟೈರ್ ಸ್ಫೋಟ, ಕಾರು ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.06  : ವೇಗವಾಗಿ ಚಲಿಸಿತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರ ಕೆ. ಬಳ್ಳೇಕಟ್ಟೆ ಬಳಿ ಸಂಭವಿಸಿದೆ.

ತಾಲ್ಲೂಕಿನ ಭರಮಸಾಗರ ವ್ಯಾಪ್ತಿಯ ಕೆ.ಬಳ್ಳೆಕಟ್ಟೆ ಬಳಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಕಾರು ಬೆಂಗಳೂರಿನಿಂದ ಪೂನಾ ಕಡೆಗೆ ಚಲಿಸುತ್ತಿತ್ತು. ಕೆ ಬಳ್ಳೇಕಟ್ಟೆ ಬಳಿ ಬಂದಾಗ ಕಾರಿನ ಟೈರ್ ಸ್ಪೋಟವಾಗಿ ಚಾಲಕನ ನಿಯಂತ್ರಣ ತಪ್ಪಿ ಎಡಗಡೆಯಿದ್ದ ಬ್ಯರಿಕೇಡ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಪತ್ತೆಯಾಗಿಲ್ಲ.  ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಚಿತ್ರದುರ್ಗ ಎಸ್.ಪಿ. , ಡಿ ವೈ. ಎಸ್.ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment