Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಿಂದ ಕೊಟ್ಟೂರಿಗೆ  ಫೆ. 10 ರಿಂದ ಪಾದಯಾತ್ರೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ.18 : ನಗರದ ದೊಡ್ಡಪೇಟೆಯ ಶ್ರೀ ಗುರು ಕೊಟ್ಟೂರು ಬಸವೇಶ್ವರ ಪಾದಯಾತ್ರೆ ಸಮಿತಿವತಿಯಿಂದ ಕನ್ನಡನಾಡಿನ ಹಾಗೂ ವಿಶ್ವಗುರು ಬಸವಣ್ಣನವರ ಹಿರಿಮೆಯನ್ನು ಸಾರುತ್ತಾ ವಿಶ್ವಶಾಂತಿಗಾಗಿ ಫೆ.12 ರಂದು ಶ್ರೀ ಕ್ಷೇತ್ರ ಕೊಟ್ಟೂರಿನಲ್ಲಿ ನಡೆಯಲಿರುವ ರಥೋತ್ಸವದ ಪ್ರಯುಕ್ತ 28ನೇ ವರ್ಷದ ಸಮಗ್ರ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ತಿಳಿಸಿದೆ.

ಫೆ. 10ರ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ದೊಡ್ಡಪೇಟೆಯ ಶ್ರೀ ಚೌಡೇಶ್ವರಿ ದೇವಸ್ಥಾನದಿಂದ ಮಹಾಮಂಗಳಾರತಿಯೊಂದಿಗೆ ಪಾದಯಾತ್ರೆ ಪ್ರಾರಂಭವಾಗಲಿದೆ. ಈ ಪಾದಯಾತ್ರೆಯೂ ಮಲ್ಲಾಪುರ, ಗುಡ್ಡದರಂಗವ್ವನಹಳ್ಳಿ, ಬೋಗಳೇರಹಟ್ಟಿ, ಕಲ್ಲೇದೇವರಪುರ, ದೊಣ್ಣೆಹಳ್ಳಿ, ಜಗಳೂರು, ಕೆಂಚೇನಹಳ್ಳಿ, ಹೊಸಕೆರೆ, ಗಡಿಮಾಕುಂಟೆ, ಉಜ್ಜನಿ ಮಾರ್ಗ ಮೂಲಕ ಕೊಟ್ಟೂರು ತಲುಪಲಿದೆ.

ಪಾದಯಾತ್ರೆಯಲ್ಲಿ ಭಾಗವಹಿಸುವ ಭಕ್ತಾಧಿಗಳು 9972975010, 99864 28930, 99020 23444 ಮತ್ತು 99015 64288 ಈ ದೂರವಾಣಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now