ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಹಲವು ದಿನಗಳ ಹಿಂದೆ ಟೊಮೆಟೋ ಬೆಲೆ ಪಾತಳಕ್ಕೆ ಕುಸಿತ ಕಂಡಿದ್ದು ಬೆಳೆಗಾರರಲ್ಲಿ ನಿರಾಸೆ ಮೂಡಿಸಿತ್ತು. ಇದೀಗ ಟೊಮೆಟೋ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದ್ದು ಟೊಮೇಟೋ ಬೆಳೆಗಾರರಲ್ಲಿ ಸಂತಸ ಮೂಡಿದೆ.
15 ದಿನಗಳ ಹಿಂದೆ ಟೊಮೆಟೊ ಬೆಲೆ ಬಾರಿ ಕುಸಿತ ಕಂಡಿದ್ದು ರೈತರು ಬೆಳೆ ಬೆಳೆಯಲು ಹಾಕಿದ್ದ ಬಂಡವಾಳವು ಸಹ ಬಾರದಂತಾಗಿ ಬೆಳೆದ ಟೊಮೆಟೊ ಬೆಳೆಯನ್ನು ರೈತರು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದರು. ಬಹುಶಃ ಕೆಲವು ರೈತರು ಬೆಳೆಯನ್ನ ಜಮೀನಿನಲ್ಲೆ ಕೊಳೆಯಲು ಬಿಟ್ಟಿದ್ದರು.
ಆದರೆ ಈಗ ಜಿಲ್ಲೆಯಲ್ಲಿ ಟೊಮೆಟೊ ಬೆಲೆ ಒಂದು ಕೆಜಿಗೆ 40 ರಿಂದ 60 ರೂಪಾಯಿಗಳಿದ್ದ, 1 ಬಾಕ್ಸ್ ಗೆ 500 ರಿಂದ 700 ರೂಪಾಯಿ ಏರಿಕೆ ಕಂಡಿದ್ದ ಟೊಮೆಟೊ ಬೆಳೆಗಾರರಿಗೆ ತುಸು ಸಂತಸ ತಂದರೆ ಗ್ರಾಹಕರಿಗೆ ಹೊರೆಯಾಗಿಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











