ಸುದ್ದಿಒನ್, ಚಿತ್ರದುರ್ಗ, ಮೇ. 01 : ಚಿತ್ರದುರ್ಗ ಬ್ರಾಹ್ಮಣ ಸಂಘದ ವತಿಯಿಂದ ಶಂಕರಾಚಾರ್ಯರ ಜಯಂತಿ ಹಾಗೂ ರಾಮಾನುಜಾಚಾರ್ಯರ ಜಯಂತಿಯನ್ನು ಮೇ 2 ರಂದು ಮಧ್ಯಾಹ್ನ 12-30 ಕ್ಕೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಆಚರಿಸಲಾಗುವುದು.
ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಕ್ಕೆ ಶಂಕರಾಚಾರ್ಯರ ಜಯಂತಿ ನಂತರ ಮಧ್ಯಾಹ್ನ 12-30 ಕ್ಕೆ ಗಾಯತ್ರಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ಚಿತ್ರದುರ್ಗ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಗಳ ಕೃಪೆಗೆ ಪಾತ್ರರಾಗುವಂತೆ ಚಿತ್ರದುರ್ಗ ಬ್ರಾಹ್ಮಣ ಸಂಘದ ಕಾರ್ಯದರ್ಶಿ ಡಿ.ಜಿ.ಪ್ರಾಣೇಶ್ರಾವ್ ಮನವಿ ಮಾಡಿದ್ದಾರೆ.






