ಚಿತ್ರದುರ್ಗ : ರಾಜ್ಯ ಸರ್ಕಾರ (Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕವಿತಾ ಎಸ್. ಮನ್ನಿಕೇರಿ ಅವರನ್ನು ವರ್ಗಾವಣೆ ಮಾಡಿದ್ದು, ಆ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಕೆ. ನಂದಿನಿ ದೇವಿ ಅವರಿದ್ದ ಹುದ್ದೆಗೆ ಎಂ.ಎಸ್ ದಿವಾಕರ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಐಎಎಸ್ ಅಧಿಕಾರಿ ದಿವ್ಯ ಪ್ರಭು ಜಿ ಆರ್ ಜೆ. ಅವರು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಐಎಎಸ್ ಅಧಿಕಾರಿ ಎಂ.ಎಸ್.ದಿವಾಕರ, ಹೆಚ್ಚುವರಿ ಕೃಷಿ ನಿರ್ದೇಶಕರಾಗಿದ್ದು, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿಯೋಜಿಸಲಾಗಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…