ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಐದು ವರ್ಷಗಳ ಮೇಲ್ಪಟ್ಟು ಒಂದೆ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಹಾಗೂ ಇಲಾಖೆಯಲ್ಲಿರುವ ಎಲ್ಲಾ ಅಂಗ ರಕ್ಷಕರನ್ನು ಸರ್ಕಾರದ ಆದೇಶದಂತೆ ವರ್ಗಾವಣೆಗೊಳಿಸಬೇಕೆಂದು ಕರುನಾಡ ವಿಜಯಸೇನೆಯಿಂದ ಹೆಚ್ಚುವರಿ ರಕ್ಷಣಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಒಂದೇ ಠಾಣೆಯಲ್ಲಿ ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ವರ್ಗಾಣೆಗೊಳಿಸುವಂತೆ ಗೃಹ ಇಲಾಖೆಯು ಆದೇಶಿಸಿದ್ದು, ಜಿಲ್ಲೆಯಲ್ಲಿ ಕೆಲವು ಪೊಲೀಸರನ್ನು ವರ್ಗಾವಣೆಗೊಳಿಸಿರುವುದು ಯಾವ ನ್ಯಾಯ? ವರ್ಗಾವಣೆ ವಿಚಾರ ಬಂದಾಗ ನಿಯಮಾವಳಿ ಪ್ರಕಾರ ವರ್ಗಾವಣೆಯಾಗಬೇಕು. ಜಿಲ್ಲೆಯ ಕೆಲವು ಠಾಣೆಗಳಲ್ಲಿ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿರುವವರನ್ನು ಕೂಡಲೆ ಬೇರೆಡೆ ವರ್ಗಾವಣೆಗೊಳಿಸುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಹೆಚ್ಚುವರಿ ರಕ್ಷಣಾಧಿಕಾರಿಯವರಲ್ಲಿ ವಿನಂತಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿಗಳಾದ ಅಣ್ಣಪ್ಪ, ಜಗದೀಶ್ ಸಿ. ಉಪಾಧಕ್ಷ ಮುಜಾಹಿದ್, ನಗರಾಧ್ಯಕ್ಷ ಪಿ.ಅವಿನಾಶ್, ಪಾಂಡು, ನಾಗರಾಜ್ ಮುತ್ತು, ಮಧುಸೂಧನ್, ಸುರೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








