Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಿತ್ರದುರ್ಗ | ನಿಂತಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ, ಇಬ್ಬರು ಸಾವು,

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ನವೆಂಬರ್.22 : ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಹೊಸಕಲ್ಲಹಳ್ಳಿ ಬಳಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

ಮೃತಪಟ್ಟವರನ್ನು ಜೋಡಿಚಿಕ್ಕೇನಹಳ್ಳಿಯ 26 ವರ್ಷದ ಮನೋಜ್ ಮತ್ತು 28 ವರ್ಷದ ಹರೀಶ್ ಎಂದು ಗುರುತಿಸಲಾಗಿದೆ. ಬೈಕ್ ಸವಾರರ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.

ಟ್ರಾಕ್ಟರ್ ಗೆ ಬೈಕ್ ಡಿಕ್ಕಿಯಾದ ರಭಸಕ್ಕೆ ತೀವ್ರ ರಕ್ತಸ್ರಾವದಿಂದ ಮನೋಜ್ ಸ್ಥಳದಲ್ಲಿಯೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

Join WhatsApp

Join Now

Join Telegram

Join Now