ಚಿತ್ರದುರ್ಗ | ರಸ್ತೆ  ಅಪಘಾತದಲ್ಲಿ ಇಬ್ಬರು ಸಾವು

suddionenews
0 Min Read

ಚಿತ್ರದುರ್ಗ: ಹಿರಿಯೂರು ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ  ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ದುರಂತ ಸಂಭವಿಸಿದೆ.

ಟೆಂಪೊ ಗೋಕರ್ಣದಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಮೃತರಲ್ಲಿ ಒಬ್ಬರು ಶ್ವೇತಾ (24) ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಗಾಯಗೊಂಡ 10 ಮಂದಿಯನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *