Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಶೋಷಿತರ ಒಗ್ಗಟ್ಟು ಅನಿವಾರ್ಯ: ಸಾಮಾಜಿಕ ಚಿಂತಕ ಜೆ. ಯಾದವರೆಡ್ಡಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 13 : ಕರ್ನಾಟಕದಲ್ಲಿಯೂ ಸ್ವಯಂ ಸೈನಿಕ ದಳ ಆರಂಭಿಸುವಂತೆ ಬಾಳೆಕಾಯಿ ಶ್ರೀನಿವಾಸ್ ಮನವಿ ಮಾಡಿದರು.
ಗುಜರಾತ್‍ನಿಂದ ಚಿತ್ರದುರ್ಗಕ್ಕೆ ಆಗಮಿಸಿದ್ದ ಸ್ವಯಂ ಸೈನಿಕ ದಳದೊಂದಿಗೆ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಬುದ್ದ, ಬಸವ, ಅಂಬೇಡ್ಕರ್ ಇವರುಗಳ ಹೆಸರುಗಳನ್ನೇಳಿಕೊಂಡರೆ ಸಾಲದು ಅವರ ತತ್ವ ಸಿದ್ದಾಂತ, ಆದರ್ಶಗಳಂತೆ ಪ್ರತಿಯೊಬ್ಬರು ನಡೆದಾಗ ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯ. ಮನುವಾದಿಗಳು ಮತ್ತು ಆರ್.ಎಸ್.ಎಸ್.ನವರಿಂದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಶೋಷಿತರಿಗೆ ರಕ್ಷಣೆಯಿಲ್ಲದಂತಾಗಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಉಳಿಸಬೇಕಾಗಿರುವುದರಿಂದ ಎಲ್ಲರೂ ಒಗ್ಗಟ್ಟಾಗಬೇಕೆಂದು ಹೇಳಿದರು.

ಸ್ವಯಂ ಸೈನಿಕ ದಳದ ವಿಶಾಲ್ ಮಾತನಾಡಿ ದೇಶದಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಅವನತಿಯತ್ತ ಸಾಗುತ್ತಿದ್ದಾರೆ. ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಎಲ್ಲರೂ ಸಮಾನರು. ಮೇಲು ಕೀಳೆಂಬ ತಾರತಮ್ಯ ನಿವಾರಣೆಯಾಗಬೇಕು. 4200 ಕಿ.ಮೀ. ಸೈಕಲ್ ರ್ಯಾಲಿ ನಡೆಸಿ ಕಾನ್ಷಿರಾಂ ಉತ್ತರ ಪ್ರದೇಶದಲ್ಲಿ ಮಾಯಾವತಿಯನ್ನು ಗೆಲ್ಲಿಸಿಕೊಂಡು ಮುಖ್ಯಮಂತ್ರಿಯನ್ನಾಗಿಸಿದರು.
ಆರ್.ಎಸ್.ಎಸ್. ನಿರಂತರವಾಗಿ ಕೆಲಸ ಮಾಡಿದ ಫಲವಾಗಿ ನರೇಂದ್ರಮೋದಿ ದೇಶದ ಪ್ರಧಾನಿಯಾಗಿದ್ದಾರೆ. ಅದೆ ರೀತಿ ನಾವು ಕೂಡ ಸಂಘಟಿತರಾಗಬೇಕು ಎಂದು ತಿಳಿಸಿದರು.

ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಆರ್.ಎಸ್.ಎಸ್.ಮನುವಾದಿಗಳಿಂದ ಸಂವಿಧಾನಕ್ಕೆ ಅಪಾಯವಿದೆ. ವಿರೋಧಿ ಶಕ್ತಿಗಳನ್ನು ಮಣಿಸಬೇಕಾದರೆ ಮೊದಲು ಎಲ್ಲರೂ ಒಗ್ಗಟ್ಟಾಗಬೇಕು. ಆಗ ಮಾತ್ರ ಸಂವಿಧಾನ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ. ಮನುವಾದಿಗಳ ಕುತಂತ್ರಗಳ ವಿರುದ್ದ ದಲಿತರು, ಹಿಂದುಳಿದವರು, ಶೋಷಿತರು, ಅಲ್ಪಸಂಖ್ಯಾತರಲ್ಲಿ ಜಾಗೃತಿ ಮೂಡಿಸಬೇಕಿದೆ. ಬುದ್ದ, ಅಂಬೇಡ್ಕರ್‍ರವರ ಹೆಸರನ್ನು ಸ್ಮರಣೆ ಮಾಡುತ್ತಿದ್ದರೆ ಸಾಲದು ಅವರುಗಳು ಹಾಕಿಕೊಟ್ಟಂತ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರು ನಡೆದಾಗ ಸಮಾಜದಲ್ಲಿ ಸುಧಾರಣೆ ತರಬಹುದು ಎಂದು ಸಲಹೆ ನೀಡಿದರು.

ಕುಂಚಿಗನಹಾಳ್ ಮಹಲಿಂಗಪ್ಪ, ದಲಿತ ಮುಖಂಡ ಬಿ.ರಾಜಣ್ಣ, ಉಪ್ಪಾರ ಸಮಾಜದ ಮುಖಂಡ ಆರ್.ಮೂರ್ತಿ, ಕೆ.ರಾಜಣ್ಣ, ಲಕ್ಷ್ಮಿಸಾಗರ ರಾಜಣ್ಣ ಇನ್ನು ಅನೇಕರು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now