Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಮಾತಿನ ಜಟಾಪಟಿ; ನಾಯಕರ ವಿರುದ್ಧವೇ ಕಾರ್ಯಕರ್ತರ ಆಕ್ರೋಶ!

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರ ನೇಮಕ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಂಘಟನ್ ಸೃಜನ್ ಅಭಿಯಾನ್ ಸಭೆಯ ಆರಂಭದಲ್ಲಿ ಗದ್ದಲ ದಾಂಧಲೆಯುಂಟಾದ ಪರಿಣಾಮ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ವೀಕ್ಷರುಗಳ ನಡುವೆ ಮಾತಿನ ಜಟಾಪಟಿ ನಡೆಯಿತು.

ನಗರ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ಸಭೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಬಿ.ಟಿ.ಜಗದೀಶ್ ಆಗಮಿಸಿದಾಗ ಬೆಂಬಲಿಗರು ಜೈಕಾರ ಹಾಕುತ್ತ ಗದ್ದಲ ಸೃಷ್ಠಿಸಿದರು. ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್ ಬಿ.ಟಿ.ಜಗದೀಶ್‍ವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕೆಂದು ಏರು ಧ್ವನಿಯಲ್ಲಿ ಕೂಗಿ ಅವರ ಭಾವಚಿತ್ರವನ್ನು ವೀಕ್ಷಕರುಗಳ ಎದುರು ಪ್ರದರ್ಶಿಸಿದಾಗ ಜೊತೆಯಲ್ಲಿದ್ದ ಇತರೆ ಬೆಂಬಲಿಗರು ನಾಯಕರುಗಳತ್ತ ನುಗ್ಗಿದ್ದರಿಂದ ಹತ್ತು ನಿಮಿಷಗಳಿಗೂ ಹೆಚ್ಚು ಕಾಲ ಸಭೆ ಗದ್ದಲದಲ್ಲಿ ಮುಳುಗಿತು.
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಇವರುಗಳು ವೇದಿಕೆ ಹತ್ತಿ ಬಿ.ಟಿ.ಜಗದೀಶ್ ಪರ ಘೋಷಣೆಗಳನ್ನು ಕೂಗಿದರು. ಆಗ ಮಾಜಿ ಸಂಸದ ವಿ.ಎಸ್.ಉಗ್ರಪ್ಪನವರು ಶಿಸ್ತಿಲ್ಲದ ನಿಮ್ಮ ನಡೆಯನ್ನು ಸಹಿಸುವುದಿಲ್ಲ. ಬಿಜೆಪಿ ಬೆಂಬಲಿಗರ ತರ ಕಾಣುತ್ತೀರ ಎಂದಾಗ ಶ್ರೀರಾಮ್ ಮತ್ತಿತರರು ಉಗ್ರಪ್ಪನವರ ವಿರುದ್ದ ಹರಿಹಾಯ್ದರು. ಆಗ ನಿಮ್ಮ ಗೊಡ್ಡು ಬೆದರಿಕೆಗಳಿಗೆಲ್ಲಾ ಜಗಲ್ಲ. ಸಭೆಯಿಂದ ಹೊರ ನಡೆಯಿರಿ ಎಂದು ಗದರಿಸಿದರು.

 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಒಬ್ಬೊಬ್ಬ ಆಕಾಂಕ್ಷಿಯು ಕೂಡ ತನ್ನ ಬೆಂಬಲಿಗರನ್ನು ಕರೆ ತಂದು ನಾಯಕರುಗಳ ಮುಂದೆ ಪ್ರದರ್ಶಿಸುತ್ತಿದ್ದರು. ಕಾಂಗ್ರೆಸ್ ಕಾರ್ಯಕರ್ತರುಗಳೆ ಅಲ್ಲದೆ ಅನೇಕ ಮಹಿಳೆಯರು ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ 60 ಆಕಾಂಕ್ಷಿಗಳ ಹೆಸರುಗಳನ್ನು ಸೌಗಂಧಿಕ ರಘುನಾಥ್ ಓದಿ ಇದರಲ್ಲಿ ಒಬ್ಬರ ಹೆಸರನ್ನು ಹೈಕಮಾಂಡ್‍ಗೆ ಶಿಫಾರಸ್ಸು ಮಾಡಲಾಗುವುದೆಂದು ಹೇಳಿದಾಗ ಸಭೆಯಲ್ಲಿದ್ದ ಅನೇಕರು ಆಕ್ಷೇಪ ವ್ಯಕ್ತಪಡಿಸಿ ಬೇರೆ ಬೇರೆ ತಾಲ್ಲೂಕುಗಳಲ್ಲಿ ಸಭೆ ನಡೆಸಿದಾಗ ಆರು ಜನರ ಹೆಸರನ್ನು ಆಯ್ಕೆ ಮಾಡಿ ಪಕ್ಷದ ವರಿಷ್ಟರಿಗೆ ಕಳಿಸಲಾಗುವುದೆಂದು ತಿಳಿಸಿ ಈಗ ಏಕೆ ಒಬ್ಬರ ಹೆಸರನ್ನು ಶಿಫಾರಸ್ಸು ಮಾಡಲಾಗುವುದೆಂದು ಹೇಳುತ್ತಿದ್ದೀರ. ಈ ತಾರತಮ್ಯವೇಕೆ ಎಂದು ಕೆಲವು ಆಕಾಂಕ್ಷಿಗಳು ತಗಾದೆ ತೆಗೆದಾಗ ಮತ್ತೆ ಸಭೆ ಗೊಂದಲವನ್ನು ಎದುರಿಸಬೇಕಾಯಿತು. ಆಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಶಿಸ್ತಿಲ್ಲದೆ ವರ್ತಿಸುವವರಿಗೆ ನೋಟಿಸ್ ಕೊಡಬೇಕಾಗುತ್ತದೆಂದು ಎಚ್ಚರಿಸಿದರು. ಒಟ್ಟಾರೆ ಸಂಘಟನ್ ಸೃಜನ್ ಅಭಿಯಾನ್ ಸಭೆ ಆರಂಭದಿಂದ ಕೊನೆವರೆಗೂ ಗದ್ದಲದಲ್ಲಿಯೇ ನಡೆಯಿತು.
ಅಸ್ಸಾಂನಿಂದ ಜಿಲ್ಲೆಗೆ ವೀಕ್ಷಕರಾಗಿ ಆಗಮಿಸಿರುವ ರಿಪುನ್ ಬೊಹರಾ ಸುಮ್ಮನೆ ಕುಳಿತು ಎಲ್ಲವನ್ನು ಮೌನವಾಗಿ ವೀಕ್ಷಿಸುತ್ತಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now